23.2 C
Shimoga
Sunday, November 27, 2022

ಕೋಣಂದೂರು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು 30 ಹಾಸಿಗೆಗಳ ಮಾದರಿ ಸಮುದಾಯ ಆರೋಗ್ಯ ಕೇಂದ್ರವಾಗಿ ಉನ್ನತಿಗೆ

ತೀರ್ಥಹಳ್ಳಿ : ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು 30 ಹಾಸಿಗೆಗಳ ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಉನ್ನತೀಕರಿಸಲು ಆಡಳಿತಾತ್ಮಕ ಮಂಜೂರಾತಿ ನೀಡಲಾಗಿದೆ.

ಗೃಹ ಸಚಿವ ಆರಗ ಜ್ಞಾನೇಂದ್ರ ಅವರೂ ಉಪಸ್ಥಿತರಿದ್ದ ಸಂಪುಟದ ಸಭೆ ಈ ನಿರ್ಧಾರ ಕೈಗೊಂಡಿದ್ದು ಬಹಳ ದಿನಗಳಿಂದ ಬೇಡಿಕೆಯಾಗಿಯೇ ಉಳಿದಿದ್ದ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಿದೆ.

2022-23ನೇ ಸಾಲಿನ ಆಯ-ವ್ಯಯ ಭಾಷಣದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ರಾಜ್ಯದಲ್ಲಿ ಹೆಚ್ಚಿನ ಕಾರ್ಯ ಒತ್ತಡವಿರುವ ಒಟ್ಟು 100 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 1000 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಉನ್ನತೀಕರಿಸುವ ಯೋಜನೆಯನ್ನು ಘೋಷಿಸಿದ್ದರು.

ಈ ಯೋಜನೆಯ ಲಾಭ ತಾಲೂಕಿನ ಜನತೆಗೆ ಪಡೆದುಕೊಳ್ಳಲು ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರರವರು ವಿಶೇಷ ಮುತುವರ್ಜಿ ವಹಿಸಿದ್ದರು.

ತಾಲೂಕಿನ ಜನತೆಯ ಬಹಳ ದಿನಗಳ ಬೇಡಿಕೆಯನ್ನು ಈಡೇರಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರರವರು ಕೃತಜ್ಞತೆ ಸಲ್ಲಿಸಿದ್ದಾರೆ.

- Advertisement -

More articles

LEAVE A REPLY

Please enter your comment!
Please enter your name here

- Advertisement -

Latest article

error: Content is protected !!