ಕೋಣಂದೂರು NRS ಕಾಲೇಜಿನ ಪ್ರಾಚಾರ್ಯ ಗಣೇಶ್ ಮೂರ್ತಿ ನಿಧನ

0
3573

ತೀರ್ಥಹಳ್ಳಿ: ಕೋಣಂದೂರು ರಾಷ್ಟ್ರೀಯ ವಸತಿ ಶಾಲೆಯ ಪ್ರಾಚಾರ್ಯ ಗಣೇಶ್ ಮೂರ್ತಿ (74) ಅವರು ಇಂದು ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಶಿವಮೊಗ್ಗದಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಭೇಟಿ ನೀಡಿ ಕಾರಿನಲ್ಲಿ ಕೋಣಂದೂರಿಗೆ ಮರಳುವ ವೇಳೆ ಇವರಿಗೆ ಎದೆ ನೋವು ಕಾಣಿಸಿಕೊಂಡಿದೆ. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿರುವುದಾಗಿ ತಿಳಿದುಬಂದಿದೆ.

ಹೊಸನಗರ ತಾಲೂಕಿನ ಅಮೃತ (ಗರ್ತಿಕೆರೆ) ಮೂಲದವರಾದ ಇವರು, ರಾಷ್ಟ್ರೀಯ ಶಿಕ್ಷಣ ಸಮಿತಿಯ ಹಿರಿಯ ಸದಸ್ಯರಾಗಿ, ಕೋಣಂದೂರು ಶರಾವತಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾಗಿದ್ದ ಇವರು ಕೋಣಂದೂರು ವಸತಿ ಶಾಲೆಯ ಮುಖ್ಯಸ್ಥರೂ ಹಾಗೂ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ರಿಜಿಸ್ಟರ್ ಆಗಿಯು ಸೇವೆ ಸಲ್ಲಿಸಿದ್ದರು.

ಕೋಣಂದೂರಿನ ಶರಾವತಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾಗಿ ಕಾರ್ಯನಿರ್ವಹಿಸಿ ನಿವೃತ್ತಿ ಬಳಿಕ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸೌಲಭ್ಯವನ್ನು ಒದಗಿಸುವ ಸದುದ್ದೇಶದಿಂದ ರಾಷ್ಟ್ರೀಯ ವಸತಿ ಶಾಲೆಯನ್ನು ಸ್ಥಾಪಿಸುವುದರ ಮೂಲಕ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡುವ ಸದುದ್ದೇಶಹೊಂದಿ ರಾಷ್ಟ್ರೀಯ ಶಿಕ್ಷಣ ಸಂಸ್ಥೆ ಶಿವಮೊಗ್ಗದ ವತಿಯಿಂದ ಕೋಣಂದೂರಿನಲ್ಲಿ ಅತ್ಯುತ್ತಮವಾದ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಯನ್ನು ತೆರೆದು ಎಲ್.ಕೆ.ಜಿಯಿಂದ ದ್ವಿತೀಯ ಪಿಯುಸಿವರೆಗಿನ ವಿದ್ಯಾರ್ಥಿಗಳಿಗೆ ಒಂದೇ ಸೂರಿನಡಿಯಲ್ಲಿ ಶಿಕ್ಷಣ ಪಡೆಯುವಂತೆ ವ್ಯವಸ್ಥೆಯನ್ನು ಮಾಡಿದ್ದರು.

ಕಾಲೇಜಿನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ:

ಭಾನುವಾರ ಬೆಳಗ್ಗೆ 10:00 ಗಂಟೆಯ ನಂತರ ಕೋಣಂದೂರು ಕಾಲೇಜಿನಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ನಂತರ ಅವರ ಸ್ವಗ್ರಾಮದಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ತಿಳಿದುಬಂದಿದೆ.

ಕಂಬನಿ ಮಿಡಿದ ಗೃಹ ಸಚಿವ ಆರಗ:

ಗಣೇಶ್ ಮೂರ್ತಿಯವರ ಅಕಾಲಿಕ ನಿಧನ ಸುದ್ದಿ ತಿಳಿಯುತ್ತಿದ್ದಂತೆ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಕಂಬನಿ ಮಿಡಿದು ಮೃತರ ಆತ್ಮಕ್ಕೆ ಶಾಂತಿ ಕೋರಿ ತೀವ್ರ ಸಂತಾಪ ಸೂಚಿಸಿದ್ದಾರೆ.

ಜನತಾ ದರ್ಶನ ರದ್ದು:

ಗೃಹ ಸಚಿವರ ಮನೆ ಗುಡ್ಡೆಕೊಪ್ಪದಲ್ಲಿ ಭಾನುವಾರ ನಡೆಯಬೇಕಿದ್ದ ಜನತಾ ದರ್ಶನ ಕಾರ್ಯಕ್ರಮ ಗಣೇಶ್ ಮೂರ್ತಿಯವರ ನಿಧನದ ಹಿನ್ನೆಲೆಯಲ್ಲಿ ರದ್ದುಗೊಳಿಸಿದ್ದಾರೆಂದು ಎಂದು ತಿಳಿದುಬಂದಿದೆ.

ಜಾಹಿರಾತು

LEAVE A REPLY

Please enter your comment!
Please enter your name here