ಕೋಮುದ್ವೇಷ ; ಯುವಕನ ಬರ್ಬರ ಹತ್ಯೆ !

0
1508

ಶಿವಮೊಗ್ಗ: ಇಲ್ಲಿನ ಸೀಗೇಹಟ್ಟಿಯಲ್ಲಿ ಭಾನುವಾರ ರಾತ್ರಿ ಯುವಕರ ಗುಂಪೊಂದು ಅನ್ಯಕೋಮಿನ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದೆ.

ಹರ್ಷ (24) ಮೃತ ಯುವಕ. ಕೆಲವು ತಿಂಗಳ ಹಿಂದೆ ಮತ್ತೊಂದು ಧರ್ಮವನ್ನು ಅವಹೇಳನ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರ ಹಾಕಿದ್ದ ಪ್ರಕರಣ ದೊಡ್ಡಪೇಟೆ ಠಾಣೆಯಲ್ಲಿ ದಾಖಲಾಗಿತ್ತು. ಟೈಲರಿಂಗ್ ವೃತ್ತಿ ಮಾಡಿಕೊಂಡಿದ್ದ ಆತನಿಗೆ ಆಗಾಗ ಬೆದರಿಕೆ ಕರೆಗಳು ಬರುತ್ತಿದ್ದವು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಆರೋಪಿಗಳನ್ನು ತಕ್ಷಣ ಬಂಧಿಸಬೇಕು. ಮೃತನ ಸಾವಿಗೆ ನ್ಯಾಯಕೊಡಿಸಬೇಕು ಎಂದು ಆಗ್ರಹಿಸಿ ವಿವಿಧ ಸಂಘಟನೆಗಳು ಮೆಗ್ಗಾನ್ ಶವಾಗಾರದ ಮುಂದೆ ಪ್ರತಿಭಟನೆ ನಡೆಸಿದವು.

ಕೊಲೆ ನಂತರ ಹಳೆ ಶಿವಮೊಗ್ಗ ಪ್ರಕ್ಷುಬ್ಧಗೊಂಡಿದೆ. ಆಜಾದ್ ನಗರದಲ್ಲಿ ಕಲ್ಲು ತೂರಾಟ ನಡೆದಿದ್ದು ಪೊಲೀಸರು ಲಾಠೀ ಚಾರ್ಜ್ ನಡೆಸಿದ್ದಾರೆ. ರವಿವರ್ಮ ಬೀದಿ ಮತ್ತು ಆಜಾದ್ ನಗರದಲ್ಲಿ ಕಲ್ಲು ತೂರಾಟವಾಗಿದ್ದು ಎಸ್‌ಪಿ ಲಕ್ಷ್ಮೀ ಪ್ರಸಾದ್ ಸ್ಥಳದಲ್ಲೇ ಇದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here