ಕೋವಿಡ್ ಲಸಿಕೆ ನೀಡಲು ಮನೆ-ಮನೆಗೆ ತೆರಳಿದ ತಹಶೀಲ್ದಾರ್ ವಿ.ಎಸ್ ರಾಜೀವ್ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು

0
245

ಹೊಸನಗರ: ತಾಲ್ಲೂಕಿನಲ್ಲಿ 9848ಜನರು ಕೋವಿಡ್ 2ನೇ ಡೋಸ್ ಲಸಿಕೆಯನ್ನು ಪಡೆಯಬೇಕಾಗಿದ್ದು ಗ್ರಾಮ ಪಂಚಾಯಿತಿ ಆರೋಗ್ಯ ಇಲಾಖೆ ಹಾಗೂ ಅಂಗನವಾಡಿಗಳಲ್ಲಿ ಲಸಿಕೆ ಕೇಂದ್ರಗಳನ್ನು ಅಕ್ಟೋಬರ್ 30ರವರೆಗೆ ತೆರೆದಿದ್ದರೂ ಕೆಲವರು ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿದ್ದು ಇದನ್ನು ಮನಗಂಡ ಹೊಸನಗರದ ತಹಶೀಲ್ದಾರ್ ವಿ.ಎಸ್ ರಾಜೀವ್, ಶಿರಾಸ್ಥೆದಾರ್ ಸುಧೀಂದ್ರಕುಮಾರ್, ಆರೋಗ್ಯಾಧಿಕಾರಿ ಸುರೇಶ್, ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತೆಯರು ಯಾರ‍್ಯಾರು 2ನೇ ಡೋಸ್ ಕೋವಿಡ್ ಲಸಿಕೆ ಪಡೆಯಲಿಲ್ಲವೂ ಅವರ ಮನೆ-ಮನೆಗಳಿಗೆ ಭೇಟಿ ನೀಡಿ ಮನೆಯಲ್ಲಿ ಲಸಿಕೆ ನೀಡುವ ಕಾರ್ಯಕ್ರಮವನ್ನು ನಡೆಸುತ್ತಿದ್ದು ಅಕ್ಟೋಬರ್ 30ರ ಒಳಗೆ ಬಾಕಿ ಇರುವ 9848ಜನರಿಗೂ 2ನೇ ಡೋಸ್ ಲಸಿಕೆಯನ್ನು ನೀಡುವ ಗುರಿಯನ್ನು ಹೊಂದಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here