ಕೋವಿಡ್-19ರ ಹಿನ್ನಲೆಯಲ್ಲಿ ಧಾರ್ಮಿಕ ಆಚರಣೆಗಳು ಸಭೆ ಸಮಾರಂಭಗಳಿಗೆ ನಿರ್ಬಂಧ…!

0
648

ಶಿವಮೊಗ್ಗ : ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಂಪು ಗುಂಪಾಗಿ ಕೋವಿಡ್ -19 ಪ್ರಕರಣಗಳು ವರದಿಯಾಗುತ್ತಿದ್ದು, 2ನೇ ಅಲೆಯ ಅಪಾಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಮುಂಬರುವ ಯುಗಾದಿ, ಹೋಳಿ ಹಬ್ಬ, ಷಬ್-ಎ-ಬರಾತ್, ಗುಡ್ ಫ್ರೈಡೆ ಇತ್ಯಾದಿ ಹಬ್ಬಗಳ ಸಂದರ್ಭಗಳಲ್ಲಿ ನಡೆಯಬಹುದಾದ ಸಮಾರಂಭಗಳು, ಆಚರಣೆಗಳು ಹಾಗೂ ಸಾರ್ವಜನಿಕರು ಗುಂಪು ಸೇರಬಹುದಾದ ಇತರ ಚಟುವಟಿಕೆಗಳು ಸೋಂಕು ಹರಡುವಿಕೆಯನ್ನು ಗಣನೀಯವಾಗಿ ಹೆಚ್ಚಿಸಬಹುದಾದ ಆತಂಕದ ಜೊತೆಗೆ ಕೋವಿಡ್-19 ಹರಡುವಿಕೆಯು ನಿಯಂತ್ರಣದಲ್ಲಿರಿಸಲು ಮುಂಬರುವ ಹೋಳಿ ಹಬ್ಬ, ಯುಗಾದಿ, ಷಬ್-ಎ-ಬರಾತ್, ಗುಡ್ ಫ್ರೈಡೆ ಇತ್ಯಾದಿ ಹಬ್ಬಗಳ ಸಂದರ್ಭಗಳಲ್ಲಿ ನಡೆಯಬಹುದಾದ ಸಮಾರಂಭಗಳು, ಆಚರಣೆಗಳು ಹಾಗೂ ಸಾರ್ವಜನಿಕರು ಗುಂಪು ಸೇರಬಹುದಾದ ಇತರ ಚಟುವಟಿಕೆಗಳನ್ನು ನಡೆಸದಂತೆ ಸರ್ಕಾರವು ಆದೇಶಿಸಿದೆ. ಈ ರೀತಿ ಸಭೆ ಸಮಾರಂಭಗಳು ಆಚರಣೆಗಳಲ್ಲಿ ಗುಂಪು ಗುಂಪಾಗಿ ಸೇರಿದರೆ National Disaster Management Act-2005 ಅಡಿಯಲ್ಲಿ ಅಧಿಕಾರವನ್ನು ಚಲಾಯಿಸಿ ನಿರ್ಬಂಧಿಸಿ ಆದೇಶಿಸಿದೆ.

ಮೇಲೆ ತಿಳಿಸಿದ ನಿಯಮಗಳನ್ನು ಉಲ್ಲಂಘಿಸಿದಲ್ಲಿ ಅಂತಹ ವ್ಯಕ್ತಿ, ಸಂಘ-ಸಂಸ್ಥೆಗಳ ವಿರುದ್ಧ ವಿಪತ್ತು ನಿರ್ವಾಹಣ ಕಾಯ್ದೆ-2005 ಹಾಗೂ ಐ.ಪಿ.ಸಿ.ಸೆಕ್ಷನ್ 188 ಮತ್ತು ಕರ್ನಾಟಕ ಸಾಂಕ್ರಮಿಕ ರೋಗಗಳ ಕಾಯ್ದೆ 2020 ಭಾಗ (4) (5)&(10) ರೀತ್ಯಾ ಕ್ರಮವನ್ನು ಕೈಗೊಳ್ಳಲು ಅವಕಾಶವಿರುತ್ತದೆ. ಆದುದರಿಂದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಕೋವಿಡ್-19 ರೋಗವನ್ನು ನಿಯಂತ್ರಿಸಲು ಜಿಲ್ಲಾಡಳಿತ ಹಾಗೂ ಮಹಾನಗರಪಾಲಿಕೆಯೊಂದಿಗೆ ಸಹಕರಿಸುವಂತೆ ಶಿವಮೊಗ್ಗ ಮಹಾನಗರಪಾಲಿಕೆ ಆಯುಕ್ತರು ತಿಳಿಸಿರುತ್ತಾರೆ.

ಜಾಹಿರಾತು

LEAVE A REPLY

Please enter your comment!
Please enter your name here