ಕೋವಿಡ್-19 ನಿಯಂತ್ರಣ ಹೊಸ ಮಾರ್ಗಸೂಚಿ ಪಾಲನೆಗೆ ಕಟ್ಟುನಿಟ್ಟಿನ ಕ್ರಮ: ಜಿಲ್ಲಾಧಿಕಾರಿ ಕೆ.ಎನ್.ರಮೇಶ್

0
456

ಚಿಕ್ಕಮಗಳೂರು: ಕೋವಿಡ್-19 ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದ್ದು, ಜಿಲ್ಲೆಯಲ್ಲಿ ಈ ಮಾರ್ಗ ಸೂಚಿ ಪಾಲನೆಗೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ತಿಳಿಸಿದ್ದರು.

ಭಾರತ ಸರ್ಕಾರದ ಕೇಂದ್ರ ಗೃಹ ಮಂತ್ರಾಲಯದ ಆದೇಶದ ಪ್ರಕಾರ ಕೋವಿಡ್-19 ಹರಡುವಿಕೆಯನ್ನು ತಡೆಗಟ್ಟಲು ಸಾರ್ವಜನಿಕ ಸಮಾರಂಭ, ಆಚರಣೆ ಸೇರಿದಂತೆ ಮನೋರಂಜನೆ ಕಾರ್ಯಕ್ರಮ ಹಾಗೂ ಇತರೆ ಸಂದರ್ಭಗಳಲ್ಲಿ ಸೇರಬಹುದಾದ ಸಾರ್ವಜನಿಕರ ಸಂಖ್ಯೆಯನ್ನು ಮಿತಗೊಳಿಸಲು 2005ರ ಕಾಯ್ದೆ ಸೆಕ್ಷನ್ 24ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಜಿಲ್ಲೆಯಲ್ಲಿ ನಿಯಂತಯ್ರಣ ಕ್ರಮಗಳನ್ನು ಜಾರಿಗೊಳಿಸಲಾಗಿದೆ ಎಂದು ಹೇಳಿದರು.

ಸರ್ಕಾರದ ಹೊಸ ಮಾರ್ಗಸೂಚಿ ಪ್ರಕಾರ ತೆರೆದ ಪ್ರದೇಶದಲ್ಲಿ ಮದುವೆ ನಡೆಯುತ್ತಿದ್ದರೆ 200 ಜನರಿಗೆ ಹಾಗೂ ಕಲ್ಯಾಣ ಮಂಟಪ, ಸಭಾಂಗಣ, ಹಾಲ್ ಹಾಗೂ ಮುಚ್ಚಿದ ಯಾವುದೇ ಪ್ರದೇಶದಲ್ಲಿ ನಡೆಯುವ ಮದುವೆ ಸಮಾರಂಭಕ್ಕೆ 100 ಜನರಿಗೆ ಮಿತಗೊಳಿಸಬೇಕು. ಜನ್ಮದಿನ ಹಾಗೂ ಇತರೆ ಆಚರಣೆ ಸಂದರ್ಭದಲ್ಲಿ ತೆರೆದ ಪ್ರದೇಶದಲ್ಲಿ 50 ಹಾಗೂ ಸಭಾಂಗಣ, ಹಾಲ್ ಹಾಗೂ ಇತರೆ ಮುಚ್ಚಿದ ಪ್ರದೇಶದಲ್ಲಿ 25 ಜನರಿಗೆ ಮಾತ್ರ ಅವಕಾಶ ನೀಡಲಾಗುವುದು.

ನಿಧನ ಅಥವಾ ಶವ ಸಂಸ್ಕಾರದ ವೇಳೆ ತೆರದ ಪ್ರದೇಶದಲ್ಲಿ 50 ಮತ್ತು ಮುಚ್ಚಿದ ಪ್ರದೇಶದಲ್ಲಿ 25 ಜನ, ಅಂತ್ಯಕ್ರಿಯೆ ವೇಳೆ 25 ಜನರು ಮೀರದಂತೆ ಎಚ್ಚರಿಕೆ ವಹಿಸಬೇಕು ಹಾಗೂ ಇತರೆ ಸಮಾರಂಭಗಳ ಸಂದರ್ಭದಲ್ಲಿ ಸಭಾಂಗಣದ ವಿಸ್ತೀರ್ಣಕ್ಕೆ ಅನುಗುಣವಾಗಿ 50 ಜನ ಮೀರದಂತೆ ಇರಬೇಕು, ರಾಜಕೀಯ ಸಮಾವೇಶದಲ್ಲಿ 200 ಜನ ಮೀರದಂತೆ ನೋಡಿಕೊಳ್ಳಬೇಕು.

ಕೋವಿಡ್-19 ನಿಯಂತ್ರಣ ಮಾರ್ಗಸೂಚಿ ಪಾಲನೆಯಲ್ಲಿ ಲೋಪ ವ್ಯಸಗುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ-2005ರ ಕಲಂ 51 ರಿಂದ 60 ಹಾಗೂ ಭಾರತೀಯ ದಂಡ ಸಂಹಿತೆ ಮತ್ತು ಅನ್ವಯವಾಗಬಹುದಾದ ಇತರೆ ಕಾನೂನು ಉಪ ಬಂಧಗಳ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಮತ್ತು ಉಲ್ಲಂಘಿಸಿದವರ ವಿರುದ್ಧ ಎಫ್.ಐ.ಆರ್ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದರು.

ಜಾಹಿರಾತು

LEAVE A REPLY

Please enter your comment!
Please enter your name here