ಕ್ಯಾಂಟರ್ & ಸ್ಕೂಟಿ ನಡುವೆ ಭೀಕರ ಅಪಘಾತ ; ಓರ್ವ ಸ್ಥಳದಲ್ಲೇ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ !!

0
750

ಚಿಕ್ಕಮಗಳೂರು: ತಾಲ್ಲೂಕಿನ ಲಕ್ಯಾ ಕ್ರಾಸ್ ಬಳಿ ಬೆಳಿಗ್ಗೆ ಕ್ಯಾಂಟರ್ ಹಾಗೂ ಸ್ಕೂಟಿ ನಡುವೆ ಅಪಘಾತ ಸಂಭವಿಸಿದ್ದು ಘಟನೆಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ.

ಶಾಹೀದ್ (28) ಮೃತ ವ್ಯಕ್ತಿಯಾಗಿದ್ದು, ಇರ್ಫಾನ್ (26) ಗಂಭೀರವಾಗಿ ಗಾಯಗೊಂಡಿದ್ದು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ರವಾನಿಸಲಾಗಿದೆ.

ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here