ಹೊಸನಗರ: ಗ್ರಾಮೀಣ ಭಾಗದ ಕ್ರೀಡಾ ಪ್ರತಿಭೆಗಳಿಗೆ ಸೂಕ್ತ ವೇದಿಕೆ ಕಲ್ಪಿಸುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ಕೆಪಿಸಿಸಿ ಶಿವಮೊಗ್ಗ ಜಿಲ್ಲಾ ವೈದ್ಯರ ಘಟಕದ ಅಧ್ಯಕ್ಷರಾದ ಡಾ.ಪ್ರದೀಪ್ ಡಿಮೆಲ್ಲೊ ಹೇಳಿದರು.
ಮಾಸ್ತಿಕಟ್ಟೆಯಲ್ಲಿ ಆಯೋಜಿಸಲಾಗಿದ್ದ ಮಾಸ್ತಿಕಟ್ಟೆ ಪ್ರೀಮಿಯರ್ ಲೀಗ್-8ನೇ ಆವೃತ್ತಿಯ ಪಂದ್ಯಾವಳಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಮೀಣ ಭಾಗದಲ್ಲಿ ಉತ್ತಮ ಪ್ರತಿಭೆಗಳು ಇದ್ದರೂ ಅವರಿಗೆ ಸೂಕ್ತ ಅವಕಾಶಗಳು ಸಿಗುತ್ತಿಲ್ಲ. ಇದರಿಂದ ಅನೇಕರು ಕ್ರೀಡೆಯಿಂದ ವಿಮುಖರಾಗುತ್ತಿದ್ದಾರೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.
ಇತ್ತೀಚಿನ ವೈಜ್ಞಾನಿಕ ಯುಗದಲ್ಲಿ ಅನೇಕ ಯುವಕರಲ್ಲಿ ಕ್ರೀಡೆಯ ಬಗ್ಗೆ ಆಸಕ್ತಿ ಕುಂಠಿತವಾಗುತ್ತಿದೆ. ಇಂತಹ ಸಂದರ್ಭದಲ್ಲಿ ಮಾಸ್ತಿಕಟ್ಟೆಯಂತಹ ಪುಟ್ಟ ಪ್ರದೇಶದಲ್ಲಿ ಯುವಕರೆಲ್ಲರೂ ಸೇರಿ ಕ್ರೀಡಾಕೂಟ ಆಯೋಜಿಸಿರುವುದು ಮೆಚ್ಚುಗೆಯ ಸಂಗತಿ. ಕ್ರೀಡಾ ಚಟುವಟಿಕೆಗೆ ಎಂದಿಗೂ ತಮ್ಮ ಸಹಕಾರ ಇರುತ್ತದೆ ಎಂದು ಹೇಳಿದರು.
ಈ ವೇಳೆ ಕ್ರೀಡಾಕೂಟದ ಸಂಪೂರ್ಣ ಟ್ರೋಫಿಯನ್ನು ಅವರು ಕೊಡುಗೆಯಾಗಿ ನೀಡಿದರು.
ಈ ಸಂದರ್ಭದಲ್ಲಿ ಪ್ರಮುಖರಾದ ವೀರೇಂದ್ರ, ಪ್ರಸಾದ್ ಶೆಟ್ಟಿ, ರಾಘವೇಂದ್ರ, ಕೃಷ್ಣ, ನಾಗರಾಜ್, ಮಂಜುನಾಥ್, ಇಸ್ಮಾಯಿಲ್ ಮತ್ತಿತರರು ಇದ್ದರು.