23.2 C
Shimoga
Sunday, November 27, 2022

ಕ್ರೈ ಸ್ ವಸತಿ ಶಾಲೆಗಳ ಕ್ರೀಡಾಕೂಟ ; ಮೊರಾರ್ಜಿ ಶಾಲೆಯ ವಿದ್ಯಾರ್ಥಿಗಳಾದ ನಂದಿನಿ ಹಾಗೂ ಪ್ರವೀಣ್ ವಿಭಾಗ ಮಟ್ಟಕ್ಕೆ ಆಯ್ಕೆ

ಹೊಸನಗರ : 2022-23ನೇ ಸಾಲಿನ ಕ್ರೈ ಸ್ ವಸತಿ ಶಾಲೆಗಳ ಕ್ರೀಡಾಕೂಟದಲ್ಲಿ ಮೊರಾರ್ಜಿ ಶಾಲೆಯ ವಿದ್ಯಾರ್ಥಿಗಳಾದ ನಂದಿನಿ ಹಾಗೂ ಪ್ರವೀಣ್ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ಶಿವಮೊಗ್ಗ ಜಿಲ್ಲೆಯಲ್ಲಿ ಬರುವ 33 ವಸತಿ ಶಾಲೆಗಳ ಜಿಲ್ಲಾ ಮಟ್ಟದ ಕ್ರೀಡಾಕೂಟವು ಶಿಕಾರಿಪುರ ತಾಲೂಕ್ ಅಂಬಾರಗೊಪ್ಪ ವಸತಿ ಶಾಲೆಯಲ್ಲಿ ಆಯೋಜಿಸಲಾಗಿತ್ತು. ಈ ಕ್ರೀಡಾಕೂಟದಲ್ಲಿ ಹೊಸನಗರದ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆ ಗೇರುಪುರ ವಿದ್ಯಾರ್ಥಿನಿ ಕುಮಾರಿ ನಂದಿನಿ ಬಿ 200 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಮತ್ತು ವಾಲಿಬಾಲ್ ಸ್ಪರ್ಧೆಯಲ್ಲಿ ಪ್ರವೀಣ್ ಎನ್ನುವ ವಿದ್ಯಾರ್ಥಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿ ಶಾಲೆಯ ಮತ್ತು ಜಿಲ್ಲೆಯ ಗೌರವವನ್ನು ಹೆಚ್ಚಿಸಿದ್ದಾರೆ.

ಇವರನ್ನು ಶಾಲೆಯ ಪ್ರಾಂಶುಪಾಲರು ಮತ್ತು ಎಲ್ಲಾ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

- Advertisement -

More articles

LEAVE A REPLY

Please enter your comment!
Please enter your name here

- Advertisement -

Latest article

error: Content is protected !!