20.6 C
Shimoga
Friday, December 9, 2022

ಖರ್ಗೆಗೆ ಜಿಲ್ಲಾ ಕಾಂಗ್ರೆಸ್ ಅಭಿನಂದನೆ

ಶಿವಮೊಗ್ಗ: ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ಅಭಿನಂದನೆ ಸಲ್ಲಿಸಿದೆ.

ಪಕ್ಷದ ಕಚೇರಿಯಲ್ಲಿ ಮುಖಂಡರು ಹಾಗೂ ಕಾರ್ಯಕರ್ತರು ಸಿಹಿ ಹಂಚಿ ಪಟಾಕಿ ಸಿಡಿಸುವ ಮೂಲಕ ಸಂಭ್ರಮಾಚರಿಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್, ಮಲ್ಲಿಕಾರ್ಜುನ ಖರ್ಗೆಯವರು ಹಿರಿಯ ನಾಯಕರಾಗಿದ್ದು, ಕಾಂಗ್ರೆಸ್ ಪಕ್ಷ ಕಟ್ಟಿ ಬೆಳೆಸುವಲ್ಲಿ ಅವಿರತ ಶ್ರಮಪಟ್ಟಿದ್ದಾರೆ. ರಾಷ್ಟ್ರೀಯ ಅಧ್ಯಕ್ಷರಾಗಿರುವುದು ಕನ್ನಡಿಗರಿಗೆ ಹೆಮ್ಮೆಯ ವಿಷಯವಾಗಿದೆ. ವಿರೋಧ ಪಕ್ಷದ ನಾಯಕರಾಗಿಯೂ ಅವರು ಕೆಲಸ ಮಾಡಿದ್ದಾರೆ. ಎಲ್ಲಾ ಭಾಷೆಗಳಲ್ಲೂ ಅವರು ಪರಿಣಿತರಾಗಿದ್ದಾರೆ.


ಅತ್ಯಂತ ಅನುಭವೀ ರಾಜಕಾರಣಿ. ಕೇಂದ್ರದಲ್ಲೂ ಕೂಡ ಹಲವು ಖಾತೆಗಳನ್ನು ನಿಭಾಯಿಸಿದ್ದಾರೆ. ಅವರ ನಾಯಕತ್ವದಲ್ಲಿ ಕಾಂಗ್ರೆಸ್ ಕೇಂದ್ರ ಮತ್ತು ರಾಜ್ಯಗಳಲ್ಲಿ ಮತ್ತೆ ವಿಜೃಂಭಿಸಲಿದೆ ಎಂದರು.


ಈ ಸಂದರ್ಭದಲ್ಲಿ ಮುಖಂಡರುಗಳಾದ ಎಲ್. ರಾಮೇಗೌಡ, ಎನ್. ರಮೇಶ್, ಹೆಚ್.ಪಿ. ಗಿರೀಶ್, ಅನಿತಾಕುಮಾರಿ, ವಿಜ ಯಲಕ್ಷ್ಮೀ ಪಾಟೀಲ್. ವೈ.ಹೆಚ್. ನಾಗರಾಜ್, ಡಾ.ಶ್ರೀನಿವಾಸ ಕರಿಯಣ್ಣ ರವಿ, ಬಿ.ಎ. ರಮೇಶ್ ಹೆಗ್ಡೆ, ದೇವಿಕುಮಾರ್, ಸ್ಟೆ ಮಾರ್ಟಿನ್ ಸೇರಿದಂತೆ ಹಲವರಿದ್ದರು.

- Advertisement -

More articles

LEAVE A REPLY

Please enter your comment!
Please enter your name here

- Advertisement -

Latest article

error: Content is protected !!