ಖಾಸಗಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ; ಸವಾರ ಸ್ಥಳದಲ್ಲೇ ಸಾವು !

0
659

ತೀರ್ಥಹಳ್ಳಿ: ಖಾಸಗಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಮುಡುಬಾ ಬಳಿಯ 15ನೇ ಮೈಲಿಕಲ್ಲು ಬಳಿ ನಡೆದಿದೆ.

ಬೈಕ್ ಸವಾರ ಮಣಿಕಂಠ (27) ಮೃತ ದುರ್ದೈವಿಯೈಗಿದ್ದು ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ತೆರಳುತ್ತಿದ್ದಾಗ ಎದುರಿಗೆ ಬಂದ ಖಾಸಗಿ ಬಸ್ (ಮೂಕಾಂಬಿಕ)ಗೆ ಡಿಕ್ಕಿಯಾಗಿದೆ.

ಘಟನೆಯಲ್ಲಿ ಬೈಕ್ ಸವಾರನ ತಲೆ ಮೇಲೆ ಬಸ್ ಹರಿದಿದ್ದು, ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಈ ಘಟನೆ ಸಂಬಂಧ ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹಿರಾತು

LEAVE A REPLY

Please enter your comment!
Please enter your name here