ಖ್ಯಾತ ವಕೀಲ ಕೆ.ಸಿ. ನಾಗರಾಜ ರವರ ಅಕಾಲಿಕ ನಿಧನಕ್ಕೆ ಸಂತಾಪ

0
1452

ಹೊಸನಗರ: ಇಲ್ಲಿನ ನ್ಯಾಯಾಲಯದಲ್ಲಿ ಸುಮಾರು 22 ವರ್ಷಗಳಿಂದ ಸಿವಿಲ್ ಮತ್ತು ಕ್ರಿಮಿನಲ್ ವಕೀಲರಾಗಿ ಕಾರ್ಯನಿರ್ವಹಿಸಿ ಖ್ಯಾತರಾಗಿದ್ದ ಕೆ.ಸಿ.ನಾಗರಾಜ (48) ರವರು ಕಳೆದ ಕೆಲ ದಿನಗಳಿಂದ ಕೊರೊನಾ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಸಂಜೆ 7.30ಕ್ಕೆ ಉಡುಪಿಯ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಇವರ ಅಂತ್ಯಕ್ರಿಯೆಯು ಇಂದು ಮಧ್ಯಾಹ್ನ ಮೃತರ ಸ್ವಗೃಹ ಕಲ್ಲುಕೊಪ್ಪದ ಅವರ ಜಮೀನಿನಲ್ಲಿ ನಡೆಯಲಿದೆ ಎಂದು ತಿಳಿದುಬಂದಿದೆ.

ಸಂತಾಪ:

ಇವರ ನಿಧನಕ್ಕೆ ಕೆಪಿಸಿಸಿ ವಕ್ತಾರರು, ಮಾಜಿ ಶಾಸಕರಾದ ಗೋಪಾಲಕೃಷ್ಣ ಬೇಳೂರು, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಕಲಗೋಡು ರತ್ನಾಕರ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶ್ವೇತಾ ಆರ್. ಬಂಡಿ, ಬಂಡಿ ರಾಮಚಂದ್ರ, ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ ನಾಗರಾಜ್, ಪ್ರಧಾನ ಕಾರ್ಯದರ್ಶಿ ಸದಾಶಿವ ಶ್ರೇಷ್ಠಿ, ತಾಪಂ ಮಾಜಿ ಸದಸ್ಯರಾದ ಎರಗಿ ಉಮೇಶ್, ಚಂದ್ರಮೌಳಿ ಗೌಡ, ಪಟ್ಟಣ ಪಂಚಾಯತ್ ಸದಸ್ಯರಾದ ಅಶ್ವಿನ್ ಕುಮಾರ್, ಹಾಲಗದ್ದೆ ಉಮೇಶ್, ಸಾಹಿನ ನಾಸಿರ್, ಯುವ ಮುಖಂಡ ಸಣ್ಣಕ್ಕಿ ಮಂಜು, ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಬಿ.ಸಿ, ಯುವ ವಕೀಲರಾದ ಬಸವರಾಜ್ ಗಗ್ಗ, ತಾಲೂಕು ಎನ್.ಎಸ್.ಯು.ಐ ಅಧ್ಯಕ್ಷ ಮಂಜುನಾಥ್ ಡಿ.ಆರ್., ತಾಲೂಕು ಕೆಪಿಸಿಸಿ ಸಾಮಾಜಿಕ ಜಾಲತಾಣ ಅಧ್ಯಕ್ಷ ಚೇತನ್ ದಾಸ್ ಹೊಸಮನೆ ಹಾಗೂ ಇನ್ನಿತರರು ತೀವ್ರ ಸಂತಾಪ ಸೂಚಿಸಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here