23.2 C
Shimoga
Sunday, November 27, 2022

ಗಂಡ-ಹೆಂಡತಿ ಜಗಳ ; ಕೊಲೆಯಲ್ಲಿ ಅಂತ್ಯ !

ಶಿವಮೊಗ್ಗ : ಗಂಡ ಹೆಂಡತಿ ನಡುವೆ ಜಗಳವಾಗಿದ್ದು, ಗಂಡ ತನ್ನ ಹೆಂಡತಿ ಮೇಲೆ ರಾಡಿನಿಂದ ಹಲ್ಲೆ ನಡೆಸಿ, ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಶಿವಮೊಗ್ಗದ ದುಮ್ಮಳ್ಳಿಯಲ್ಲಿ ನಡೆದಿದೆ.

ಶೋಭಾ (50) ಕೊಲೆಯಾದ ಮಹಿಳೆ. ಪ್ರಕಾಶ (ಸ್ನೇಕ್ ಪ್ರಕಾಶ್) ಎಂಬಾತ ತನ್ನ ಹೆಂಡತಿ ಶೋಭರನ್ನು ಕೊಲೆ ಮಾಡಿದ್ದಾನೆ. ಇಂದು ಬೆಳಗ್ಗೆ ಸ್ಥಳಕ್ಕೆ ತುಂಗಾನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಆರೋಪಿ ಪ್ರಕಾಶ್ ನನ್ನು ಕೃತ್ಯ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಬಂಧಿಸಿದ್ದಾರೆ.

ಶೋಭಾ ದುಮ್ಮಳ್ಳಿಯಲ್ಲಿ ಹಾಲಿನ ಅಂಗಡಿ ನಡೆಸುತ್ತಿದ್ದರು. ಪತಿಯೊಂದಿಗೆ ಸಂಸಾರದಲ್ಲಿ ಸರಿಬಾರದ ಕಾರಣ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಇಬ್ಬರ ನಡುವಿನ ವೈಮನಸ್ಸಿನಲ್ಲಿ ಶೋಭಾ ಪತಿಯ ವಿರುದ್ಧ ದೂರು ದಾಖಲಿಸಿದ್ದರು. ದೂರು ವಾಪಸ್ ತೆಗೆದುಕೊಳ್ಳುವಂತೆ ಪತಿ ಅನೇಕ ಬಾರಿ ಪತ್ನಿಗೆ ಎಚ್ಚರಿಕೆ ನೀಡಿದ್ದ. ಮಾತು ಕೇಳದ ಹಿನ್ನೆಲೆಯಲ್ಲಿ ಪತಿಯೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

- Advertisement -

More articles

LEAVE A REPLY

Please enter your comment!
Please enter your name here

- Advertisement -

Latest article

error: Content is protected !!