ಗಣರಾಜ್ಯೋತ್ಸವದಂದು ಜಿಲ್ಲಾಡಳಿತದಿಂದ ಫಲಪುಷ್ಪ ಪ್ರದರ್ಶನ

0
114

ಚಿಕ್ಕಮಗಳೂರು: ತೋಟಗಾರಿಕೆ ಇಲಾಖೆಯ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ಪ್ರತೀ ವರ್ಷದಂತೆ ಸಾಲವು ಚಿಕ್ಕಮಗಳೂರಿನ ತೋಟಗಾರಿಕೆಯಾಗಿದೆ ಇಲಾಖೆಯ ಮೈದಾನದಲ್ಲಿ ಫಲಪುಷ್ಪ ಪ್ರದರ್ಶನ ಆಯೋಜನೆ ಸಂಬಂಧ ಪೂರ್ವಭಾವಿ ಸಭೆಯನ್ನು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಅಧ್ಯಕ್ಷತೆಯಲ್ಲಿ ತಮ್ಮ ಕಛೇರಿಯಲ್ಲಿ ನಡೆಸಲಾಯಿತ್ತು

ಸಭೆಯಲ್ಲಿ ಮಾತನಾಡಿದ ಮುಖ್ಯಕಾರ್ಯನಿರ್ವಹಣಾಧಿಕಾರಿ, ಪ್ರತಿ ವರ್ಷ ನಡೆಯುವ ಈ ಫಲಪುಷ್ಪ ಪ್ರದರ್ಶನವು ಜಿಲ್ಲೆಯ ಜನಾಕರ್ಷಣಾ ಕಾರ್ಯಕ್ರಮಗಳಲ್ಲೊಂದಾಗಿದೆ. ಈ ನಿಟ್ಟಿನಲ್ಲಿ ಈ ಪ್ರದರ್ಶನವನ್ನು ಇನ್ನಷ್ಟು ಆಕರ್ಷಿಸಲು ಎಲ್ಲ ರೀತಿಯ ವ್ಯವಸ್ಥೆ, ಕಾರ್ಯಕ್ರಮಗಳನ್ನು ನಡೆಸಲು ತಿಳಿಸಿದರು.

ಪ್ರಸಕ್ತ ವರ್ಷವು ಭಾರತ ಸ್ವಾತಂತ್ರ್ಯದ ಅಮೃತಮಹೋತ್ಸವ ಆಗಿರುವುದರಿಂದ ಇದಕ್ಕೆ ಪೂರಕವಾಗಿ ಫಲುಪುಷ್ಪ ಪ್ರದರ್ಶನದಲ್ಲಿ ವ್ಯವಸ್ಥೆಗಳನ್ನು ಸಿದ್ಧಗೊಳಿಸಬೇಕು. ವಿಶೇಷವಾಗಿ, ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಲು ಈ ಪ್ರದರ್ಶನದಲ್ಲಿ ಏರ್ಪಾಡು ಮಾಡಬೇಕು. ಅದೇ ರೀತಿ ಕೋವಿಡ್ ಬಗ್ಗೆ ಜಾಗೃತಿ ಮೂಡಿಸಲೂ ಕಾರ್ಯಕ್ರಮ ನಡೆಸುವಂತೆ ಅವರು ಹೇಳಿದರು.

ಫಲಪುಷ್ಪ ಪ್ರದರ್ಶನ ದಿನಗಳಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಸಾರ್ವಜನಿಕರು ಹಾಗೂ ವಿಶೇಷವಾಗಿ ಶಾಲಾ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಈ ಪ್ರದರ್ಶನ ವೀಕ್ಷಿಸುವಂತಾಗಬೇಕು ಎಂದು ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ತಿಳಿಸಿದರು.

ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಟಿ.ಆರ್. ವೇದಮೂರ್ತಿ ಮಾತನಾಡಿ, ಫಲಪುಷ್ಪ ಪ್ರದರ್ಶನಕ್ಕೆ ಪೂರ್ವಭಾವಿಯಾದ ಅಗತ್ಯ ಸಿದ್ಧತೆಗಳನ್ನು ಈಗಾಗಲೇ ಆರಂಭಿಸಲಾಗಿದೆ. ಮನೆ, ಶಾಲೆ ಹಾಗೂ ಸರಕಾರಿ ಕಚೇರಿಗಳಲ್ಲಿ ಉತ್ತಮ ಉದ್ಯಾನವನಗಳನ್ನು, ಸಸ್ಯತೋಟಗಳನ್ನು ಬೆಳೆಸಿದವರಿಗೆ ಬಹುಮಾನ ನೀಡುವ ಕಾರ್ಯಕ್ರಮವನ್ನೂ ಈ ಸಂದರ್ಭದಲ್ಲಿ ಏರ್ಪಡಿಸಲಾಗಿದೆ ಎಂದು ಹೇಳಿದರು.

ಸಭೆಯಲ್ಲಿ ವಿವಿಧ ಇಲಾಖಾಧಿಕಾರಿಗಳು, ಮೈಸೂರು ಉದ್ಯಾನ ಕಲಾ ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ಜಾಹಿರಾತು

LEAVE A REPLY

Please enter your comment!
Please enter your name here