23.2 C
Shimoga
Sunday, November 27, 2022

ಗರ್ಭಿಣಿ ಪತ್ನಿಯ ಶೀಲ ಶಂಕಿಸಿ ಕೊಲೆಗೈದು ಕಾಡಿನಲ್ಲಿ ಹೂತಿಟ್ಟಿದ್ದ ಪತಿರಾಯ !

ಅಜ್ಜಂಪುರ : ಮದುವೆಯಾಗಿ 6 ತಿಂಗಳಾಗಿದ್ದ ಗರ್ಭಿಣಿ ಪತ್ನಿಯ ಶೀಲ ಶಂಕಿಸಿದ ಪತಿ ಆಕೆಯ ಕೊಲೆ ಮಾಡಿ ಕಾಡಿನಲ್ಲಿ ಹೂತಿಟ್ಟಿದ್ದಾನೆ. ಈ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಗಂಗಗೊಂಡನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ದಾವಣಗೆರೆ ತಾಲ್ಲೂಕಿನ ಐಗೂರು ಗ್ರಾಮದ ಲೋಕೇಶಪ್ಪ ಅವರ ಪುತ್ರಿ ಚಂದ್ರಕಲಾ ಅಲಿಯಾಸ್ ರಶ್ಮಿ (21) ಕೊಲೆಯಾದ ಗೃಹಿಣಿಯಾಗಿದ್ದಾಳೆ.

ಗಂಗಗೊಂಡನಹಳ್ಳಿ ಗ್ರಾಮದ ಮೋಹನ್‌ಕುಮಾರ್ ಅಲಿಯಾಸ್ ಮನು (25) ಪತ್ನಿಯನ್ನು ಕೊಲೆ ಮಾಡಿದ ಆರೋಪಿಯಾಗಿದ್ಧಾನೆ.

ರಶ್ಮಿ ಹಾಗೂ ಮೋಹನ್‌ಕುಮಾರ್ ಕಳೆದ ಏಪ್ರಿಲ್ 13 ರಂದು ವಿವಾಹವಾಗಿದ್ದರು. ಮದುವೆ ಆಗಿ ಏಳು ತಿಂಗಳಷ್ಟೇ ಆಗಿತ್ತು. ಪತ್ನಿಯ ಶೀಲ ಶಂಕಿಸಿ ಮೋಹನ್‌ಕುಮಾರ್ ಆಗಾಗ ಜಗಳವಾಡುತ್ತಿದ್ದರು. ಜೊತೆಗೆ ವರದಕ್ಷಿಣೆಗಾಗಿಯೂ ಪೀಡಿಸುತ್ತಿದ್ದ ಎನ್ನಲಾಗಿದೆ. ಈ ವಿಷಯವನ್ನು ರಶ್ಮಿ ಹಲವು ಬಾರಿ ಪಾಲಕರ ಗಮನಕ್ಕೂ ತಂದಿದ್ದರು. ರಾಜಿ ಮೂಲಕ ಸಮಸ್ಯೆ ಬಗೆಹರಿಸುವ ಪ್ರಯತ್ನವನ್ನೂ ಮಾಡಲಾಗಿತ್ತು. ಒಂದೂವರೆ ತಿಂಗಳ ಹಿಂದೆ ದಂಪತಿ ನಡುವಿನ ಜಗಳ ವಿಕೋಪಕ್ಕೆ ತಿರುಗಿದೆ. ಪತಿ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲ್ಲೂಕಿನ ಹುಣಸಘಟ್ಟ ಕಾಡಿನಲ್ಲಿ ಗುಂಡಿ ತೆಗೆದು ಶವವನ್ನು ಹೂತ್ತಿಟ್ಟಿದ್ದಾನೆ.

ಬಳಿಕ ಮೋಹನ್‌ಕುಮಾರ್ ‘ನಿಮ್ಮ ಮಗಳು ಕಾಣೆಯಾಗಿದ್ದಾಳೆ’ ಎಂದು ರಶ್ಮಿ ಪೋಷಕರಿಗೆ ತಿಳಿಸಿದ್ದಾನೆ. ನಂತರ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪತ್ನಿ ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಿಸಿದ್ದಾನೆ. ಪೊಲೀಸರು ಆರೋಪಿಯನ್ನು ಕರೆತಂದು ವಿಚಾರಣೆಗೆ ಒಳಪಡಿಸಿದಾಗ, ಕೊಲೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ.

ಚನ್ನಗಿರಿ ಪೊಲೀಸರು ಆರೋಪಿಯ ಮಾಹಿತಿ ಆಧರಿಸಿ ಶವ ಹೂತಿಟ್ಟಿದ್ದ ಸ್ಥಳಕ್ಕೆ ತೆರಳಿದ್ದಾರೆ. ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಟ್ಟಿದ್ದಾರೆ. ಒಂದೂವರೆ ತಿಂಗಳ ಹಿಂದೆ ನಡೆದಿದ್ದ ಕೊಲೆ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಚನ್ನಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

More articles

LEAVE A REPLY

Please enter your comment!
Please enter your name here

- Advertisement -

Latest article

error: Content is protected !!