24.3 C
Shimoga
Friday, December 9, 2022

ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ

ಶಿವಮೊಗ್ಗ: ತುಂಗಾ ನಗರ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 

ಮದಾರಿಪಾಳ್ಯದ ಮೊಹ್ಮದ್ ಪೀರ್(21), ಮತ್ತೂರಿನ ಯೂಸೂಫ್ ಖಾನ್ (20), ಶಿವಮೊಗ್ಗದ ಮೊಹ್ಮದ್ ಆಸೀಫ್ ಅಲಿಯಾಸ್ ಮೊಹ್ಮದ್ ರಫಿಕ್(21) ಬಂಧಿತ  ಆರೋಪಿಗಳಾಗಿದ್ದು, ಖಚಿತ ಮಾಹಿತಿ ಮೇರೆಗೆ ಉಪವಿಭಾಗ ಡಿವೈಎಸ್ಪಿ ನೇತೃತ್ವದಲ್ಲಿ ತುಂಗಾ ನಗರ ಠಾಣೆ ಪಿಎಸ್ಐ ಮತ್ತು ಸಿಬ್ಬಂದಿಗಳ ತಂಡವು ಆರೋಪಿಗಳನ್ನು ಬಂಧಿಸಿದೆ.

ಬಂಧಿತರಿಂದ ಸುಮಾರು 20 ಸಾವಿರ ರೂ. ಮೌಲ್ಯದ 615 ಗ್ರಾಂ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ ಬೈಕ್ ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

- Advertisement -

More articles

LEAVE A REPLY

Please enter your comment!
Please enter your name here

- Advertisement -

Latest article

error: Content is protected !!