ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳ ಬಂಧನ..!

0
1106

ಶಿಕಾರಿಪುರ: ಶಿಕಾರಿಪುರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಆಶ್ರಯ ಬಡಾವಣೆ ರಸ್ತೆಯ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಆರೋಪಿಗಳು ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿರುವ ಬಗ್ಗೆ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದಾಗ ಆರೋಪಿಗಳಾದ ಶಿಕಾರಿಪುರದ ವಾಸಿ ಸುನಿಲ್ (26), ಶಿಕಾರಿಪುರ ಟೌನ್ ವಾಸಿಗಳಾದ ಇಮ್ರಾನ್ @ ಬೆಟ್ಟಿ ಇಮ್ರಾನ್ (22), ದಾದಾಪೀರ್ (22), ರಿಜ್ವಾನ್ (23) ಈ 04 ಜನ ಆರೋಪಿಗಳನ್ನು ವಶಕ್ಕೆ ಪಡೆದು, ಇವರಿಂದ ಒಟ್ಟು 400 ಗ್ರಾಂ ತೂಕದ ಮಾದಕ ವಸ್ತು ಗಾಂಜಾವನ್ನು ಹಾಗೂ ಮಾದಕ ವಸ್ತು ಗಾಂಜಾ ಮಾರಾಟ ಮಾಡಿ ಗಳಿಸಿದ 600 ರೂ. ನಗದು ಹಣವನ್ನು ವಶಪಡಿಸಿಕೊಂಡು ಇವರ ವಿರುದ್ದ NDPS ಕಾಯ್ದೆ ರೀತ್ಯ ಪ್ರಕರಣವನ್ನು ದಾಖಲಿಸಿ, ನ್ಯಾಯಾಂಗ ಬಂಧನಕ್ಕೆ ನೀಡಿರುತ್ತಾರೆ.

ಶಿವಾನಂದ ಮದರಕಂಡಿ, ಡಿವೈಎಸ್.ಪಿ ಶಿಕಾರಿಪುರ ಉಪ ವಿಭಾಗ ಹಾಗೂ ಗುರುರಾಜ್ ಎನ್ ಮೈಲಾರ್, ಸಿಪಿಐ ಶಿಕಾರಿಪುರ ವೃತ್ತ ರವರ ಮಾರ್ಗದರ್ಶನದಲ್ಲಿ, ರಾಜುರೆಡ್ಡಿ ಬೆನ್ನೂರ್ ಪಿಎಸ್ಐ, ಶಿಕಾರಿಪುರ ಟೌನ್ ಪೊಲೀಸ್ ಠಾಣೆ ರವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಹೆಚ್.ಸಿ ಸಂತೋಷ್ ಧನುವಿನಮನಿ, ಪ್ರಸನ್ನ ನಾಯಕ, ಮಲ್ಲೇಶಪ್ಪ, ಶಿವಾನಂದ್ ಗಾಮದ್ ಹಾಗೂ ಸಿಪಿಸಿ ಪ್ರಶಾಂತ್ ರವರುಗಳನ್ನೊಳಗೊಂಡ ತಂಡವು ಈ ಕಾರ್ಯಾಚರಣೆ ನಡೆಸಿತ್ತು.

ಮಾದಕ ವಸ್ತು ಗಾಂಜಾ ಮಾರಾಟದ ಬಗ್ಗೆ ಸಾರ್ವಜನಿಕರು ಶಿವಮೊಗ್ಗ ಜಿಲ್ಲಾ ಪೊಲೀಸ್ ದೂರವಾಣಿ ಸಂಖ್ಯೆ 9480803301 ಗೆ ಕರೆ ಮಾಡಿ ಮಾಹಿತಿಯನ್ನು ನೀಡಬಹುದು. ಮಾಹಿತಿಯನ್ನು ನೀಡಿದವರ ವಿವರವನ್ನು ಗೌಪ್ಯವಾಗಿಡಲಾಗುವುದು ಎಂದು ಪೊಲೀಸ್ ಅಧೀಕ್ಷಕ ಕೆ.ಎಂ ಶಾಂತರಾಜು ತಿಳಿಸಿರುತ್ತಾರೆ.

ಜಾಹಿರಾತು

LEAVE A REPLY

Please enter your comment!
Please enter your name here