ಗಾಂಧಿ ಕುಟುಂಬಕ್ಕೊಂದು, ಜನರಿಗೊಂದು ಕಾನೂನಿಲ್ಲ ಎಲ್ಲರಿಗೂ ಒಂದೇ ಕಾನೂನು ; ಆರಗ ಜ್ಞಾನೇಂದ್ರ

0
136

ಚಿಕ್ಕಮಗಳೂರು : ಈ ದೇಶದಲ್ಲಿ ಗಾಂಧಿ ಕುಟುಂಬಕ್ಕೊಂದು, ಜನರಿಗೊಂದು ಕಾನೂನಿಲ್ಲ ಎಲ್ಲರಿಗೂ ಒಂದೇ ಕಾನೂನು, ಈ ನೆಲದ ಕಾನೂನುನನ್ನ ಎಲ್ಲರೂ ಗೌರವಿಸಬೇಕೆಂದು ಗೃಹ ಸಚಿವ ಅರಗ ಜ್ಞಾನೇಂದ್ರ ಕಾಂಗ್ರೆಸ್‌ ವಿರುದ್ಧ ಕಿಡಿಕಾಡಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ತಪ್ಪಿದ್ದಾಗ ಇಡಿ ಕರೆದು ವಿಚಾರಣೆ ಮಾಡಿದಾಗ ಪ್ರತಿಭಟನೆ ಮಾಡುತ್ತಾರೆ. ಅವರಿಗೆ ಈ ದೇಶದ ಕಾನೂನಿನ ಬಗ್ಗೆ ಗೌರವವಿಲ್ಲ ಕಾಂಗ್ರೆಸ್ ದೇಶದ ಜನರ ವಿಶ್ವಾಸ ಕಳೆದುಕೊಳ್ಳುತ್ತಾರೆ, ಜನ ತುಚ್ಛವಾಗಿ ನೋಡುತ್ತಾರೆ ಎಂದು ಹೇಳಿದರು.

ಮಹಾರಾಷ್ಟ್ರ ಅತೃಪ್ತ ಶಾಸಕರು ರೇಸಾರ್ಟ್ ಹೋಗಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, 2019 ಬಿಜೆಪಿ-ಶಿವಸೇನೆ ಒಟ್ಟಿಗೆ ಜನರ ಬಳಿ ಹೋಗಿದ್ದರು, ಜನ ತೀರ್ಪು ನೀಡಿದ್ದರು. ಉದ್ಧವ್ ಠಾಕ್ರೆ ಉದ್ದಟತನ ಮಾಡಿ 8 ಪಕ್ಷ ಸೇರಿಸಿಕೊಂಡು ಸಿಎಂ ಆಗಿದ್ರು. ಎಲ್ಲರಿಗೂ ಗೊತ್ತಿತ್ತು ಇದು ಬಹಳ ದಿನ ನಡೆಯಲ್ಲ, ಈ ಸರ್ಕಾರಕ್ಕೆ ಆಯಸ್ಸು ಕಡಿಮೆ ಅಂತ. ಇಂದು ಅದರಂತೆಯೇ ಎಲ್ಲಾ ನಡೆಯುತ್ತಿದೆ, ಇದು ಮೊದಲೇ ಗೊತ್ತಿತ್ತು ಎಂದರು.

ನಕ್ಸಲ್ ನಿಗ್ರಹ ಪಡೆ ಹಿಂಪಡೆಯಲ್ಲ :

ರಾಜ್ಯದಲ್ಲಿ ನಕ್ಸಲ್ ನಿಗ್ರಹ ಪಡೆಯನ್ನ ಹಿಂಪಡೆಯುವ ಮಾತೇ ಇಲ್ಲ. ರಾಜ್ಯದಲ್ಲಿ ಶೇಕಡ 100ರಷ್ಟು ನಿಗ್ರಹವಾಗೋವರೆಗೂ ನಕ್ಸಲ್ ನಿಗ್ರಹ ಪಡೆಯನ್ನು ಹಿಂಪಡೆಯಲ್ಲ, ಒಂದು ಬಾರಿ ಪರಿಚಯಿಸಿದ್ದೇವೆ, ಕಾದು ನೋಡುತ್ತೇವೆ. ಇತ್ತೀಚೆಗೆ ಹಲವು ನಕ್ಸಲ್ ನಾಯಕರ ಬಂಧನವಾಗಿದೆ ಎಂದು ಮಾಹಿತಿ ನೀಡಿದರು.

ರಾಜ್ಯದಲ್ಲಿ ಶೇಕಡ 100ರಷ್ಟು ನಿಗ್ರಹವಾಗೋವರೆಗೂ ನಕ್ಸಲ್ ನಿಗ್ರಹ ಪಡೆಯನ್ನು ಹಿಂಪಡೆಯಲ್ಲ, ಒಂದು ಬಾರಿ ಪರಿಚಯಿಸಿದ್ದೇವೆ, ಕಾದು ನೋಡುತ್ತೇವೆ. ಇತ್ತೀಚೆಗೆ ಹಲವು ನಕ್ಸಲ್ ನಾಯಕರ ಬಂಧನವಾಗಿದೆ ಎಂದು ಮಾಹಿತಿ ನೀಡಿದರು.

ಬೇರೆ ರಾಜ್ಯದವರು ಕ್ರಮಕೈಗೊಂಡಾಗ ಇಲ್ಲಿಗೆ ಬರ್ತಾರೆ, ಇಲ್ಲಿ ಕ್ರಮ ಕೈಗೊಂಡಾಗ ಅಲ್ಲಿಗೆ ಹೋಗ್ತಾರೆ, ಎ.ಎನ್.ಎಫ್.ಸಿಬ್ಬಂದಿ ಅಲ್ಲೇ ಇರಲಿ, ಈ ಬಗ್ಗೆ ಚರ್ಚೆಯೂ ಆಗಿದೆ. ಸದ್ಯಕ್ಕೆ ಇಲ್ಲಿ ನಕ್ಸಲ್ ಚಟುವಟಿಕೆ ಏನೂ ಇಲ್ಲ ತಿಳಿಸಿದರು. ಎಲ್ಲರನ್ನೂ ಅರೆಸ್ಟ್ ಮಾಡಿದ್ದೇವೆ, ಅವರು ಮಾಹಿತಿ ನೀಡಿದವರನ್ನೂ ಬಂಧಿಸಿದ್ದೇವೆ. ನಕ್ಸಲ್ ಬೆಂಬಲಿಗರ ಮೇಲೂ ಕಣ್ಣಿಟ್ಟಿದ್ದೇವೆ. ಹೆಚ್ಚು ಕಮ್ಮಿಯಾದರೆ ಅವರ ಮೇಲೂ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಸಿದರು.

ಸಂಪೂರ್ಣ ನಿಗ್ರಹವಾಗುವವರೆಗೂ ಅವರನ್ನು ಅಲ್ಲೆ ಇಡೋದು ಒಳಿತು ಎಂದು ಭಾವಿಸಿದ್ದೇವೆ ಈ ಬಗ್ಗೆ ಚರ್ಚೆಯಾಗಿದೆ ಎಂದರು. ಬಿಜೆಪಿ ಮುಖಂಡ ಮಹಮದ್ ಅನ್ವರ್ ಹತ್ಯೆ ಪ್ರಕರಣ ತನಿಖೆಯಲ್ಲಿದೆ. ಇದೂವರೆಗೂ ಆರೋಪಿಗಳು ಪತ್ತೆಯಾಗಿಲ್ಲ. ಸಿಓಡಿ ಎಡಿಜಿಪಿ ಬಳಿ ನಿನ್ನೆಯೂ ಚರ್ಚಿಸಿದ್ದೇನೆ ಎಂದು ತಿಳಿಸಿದರು.

ಜಾಹಿರಾತು

LEAVE A REPLY

Please enter your comment!
Please enter your name here