24.3 C
Shimoga
Friday, December 9, 2022

ಗುಣಮಟ್ಟದ ಶಿಕ್ಷಣದಲ್ಲಿ ಶಿಕ್ಷಕರ ಪಾತ್ರ ಮಹತ್ತರ ; ಪ್ರದೀಪ್ ಎಸ್ ಹೆಬ್ಬೂರ್

ಶಿವಮೊಗ್ಗ: ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವಲ್ಲಿ ಶಿಕ್ಷಕರ ಪಾತ್ರ ಬಹು ಮುಖ್ಯವಾದುದು. ಅಂತಹ ಶಿಕ್ಷಕರ ಮಾರ್ಗದರ್ಶನದಲ್ಲಿ ಮಕ್ಕಳು ನಡೆದದ್ದೇ ಆದರೆ ಮಕ್ಕಳ ಭವಿಷ್ಯ ಉಜ್ವಲವಾಗುವುದರಲ್ಲಿ ಸಂದೇಹವೇ ಇಲ್ಲ ಎಂದು ಪುರದಾಳ್ ಗ್ರಾಪಂ ಸದಸ್ಯ ಪ್ರದೀಪ್ ಎಸ್ ಹೆಬ್ಬೂರ್ ಹೇಳಿದರು.

ಪುರದಾಳ್ ಗ್ರಾಮ ಪಂಚಾಯತ್ ಆವರಣದಲ್ಲಿ ಗ್ರಾಪಂ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕನ್ನಡ ರಾಜ್ಯೋತ್ಸವ, ಪ್ರತಿಭಾ ಪುರಸ್ಕಾರ ಹಾಗೂ ಗುರುವಂದನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪುರದಾಳು ಗ್ರಾಮ ಪಂಚಾಯಿತಿಯಿಂದ ಹಲವಾರು ಉತ್ತಮ ಕೆಲಸಗಾರರು ಕಾರ್ಯಗಳ ನೆರವೇರಿಸುತ್ತಿದ್ದು ಪಾರದರ್ಶಕ ಆಡಳಿತವನ್ನು ನೀಡುತ್ತಿರುವುದಲ್ಲದೆ ಈ ದಿನ ವಿಶೇಷವಾಗಿ ಪಂಚಾಯಿತಿ ವ್ಯಾಪ್ತಿಯ ಪ್ರತಿಭಾನ್ವಿತ ಮಕ್ಕಳನ್ನು ಗುರುತಿಸಿ ಅಭಿನಂದನೆ ಸಲ್ಲಿಸುತ್ತಿರುವುದರಿಂದ ಇನ್ನೂ ಹೆಚ್ಚಿನ ಸಾಧನೆಯನ್ನು ಮಾಡಲು ವಿದ್ಯಾರ್ಥಿಗಳಿಗೆ ಉತ್ತೇಜನವಾಗುತ್ತದೆ. ಅದರ ಜೊತೆಗೆ ಸಮಾಜವನ್ನು ಸರಿದಾರಿಯಲ್ಲಿ ನಡೆಸುವ ನಿಟ್ಟಿನಲ್ಲಿ ಶಿಕ್ಷಕರು ಬಹಳ ಪ್ರಮುಖ ಪಾತ್ರ ವಹಿಸಲಿದ್ದು ಶಿಕ್ಷಣದಷ್ಟೇ ಶಿಕ್ಷಕರ ಪಾತ್ರವೂ ಅದ್ವಿತೀಯವಾದದ್ದು. ಮಕ್ಕಳು ಅತಿ ಹೆಚ್ಚಿನ ಅಂಕವನ್ನು ಗಳಿಸುವುದರ ಜತೆಗೆ ಅವರಿಗೆ ನೈತಿಕ ಶಿಕ್ಷಣವನ್ನು ನೀಡಿ ವಿದ್ಯಾರ್ಥಿಗಳಿಗೆ ಸರಿಯಾದ ಮಾರ್ಗದಲ್ಲಿ ನಡೆಯುವಂತೆ ಮಾಡುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಮತ್ತು ಪುರದಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶಿಕ್ಷಕರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು ಅವರನ್ನು ಗುರುತಿಸಿ ಈ ದಿನ ಸನ್ಮಾನಿಸುತ್ತಿರುವುದು ನಮ್ಮ ಭಾಗ್ಯವೆಂದರು.

ಗ್ರಾಮ ಪಂಚಾಯಿತಿ ಅನುದಾನದಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 2021-22ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಯಲ್ಲಿ ಶೇಕಡಾ 90ಕ್ಕಿಂತ ಹೆಚ್ಚಿನ ಅಂಕ ಪಡೆದ ಮತ್ತು ಕ್ರೀಡೆಯಲ್ಲಿ ರಾಜ್ಯವನ್ನು ಪ್ರತಿನಿಧಿಸಿದ ವಿದ್ಯಾರ್ಥಿನಿಗೆ ಅಭಿನಂದನೆ ಸಲ್ಲಿಸಲಾಯಿತು.

ಪುರದಾಳು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸರ್ಕಾರಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಶಿಕ್ಷಕ ಬಾಂಧವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು ಹಾಗೂ ಗ್ರಾಮ ಪಂಚಾಯಿತಿ ಅನುದಾನದಲ್ಲಿ ಪಂಚಾಯಿತಿಯಿಂದ ಆಯ್ಕೆ ಮಾಡಲಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಮಾಡಲಾಯಿತು.

ಗ್ರಾಮ ಪಂಚಾಯಿತಿ ಗ್ರಂಥಾಲಯಕ್ಕೆ ಅವಶ್ಯವಿರುವ ತರಗತಿ ಪುಸ್ತಕಗಳನ್ನು ಮತ್ತು ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗುವ ಪುಸ್ತಕಗಳನ್ನು ಹಸ್ತಾಂತರಿಸಲಾಯಿತು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ನಾಗರಾಜ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಎಸ್ ಆರ್ ಗಿರೀಶ್ ಮತ್ತು ಗ್ರಾಮ ಪಂಚಾಯಿತಿಯ ಸದಸ್ಯರಾದ ಜಿ ಮಾನಸ, ಕುಸುಮಾ, ರಾಮಣ್ಣ, ಲಕ್ಷ್ಮೀಬಾಯಿ, ನಾಗವೇಣಿ, ಕಮಲಾಕ್ಷಿ, ಪಿಡಿಒ ಮತ್ತು ಸಿಬ್ಬಂದಿಗಳು ಗ್ರಾಮಸ್ಥರು, ಶಾಲಾ ಶಿಕ್ಷಕರು, ಹಳೆ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

- Advertisement -

More articles

LEAVE A REPLY

Please enter your comment!
Please enter your name here

- Advertisement -

Latest article

error: Content is protected !!