ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ ; ಸಚಿವ ಕೆ.ಎಸ್ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ‌ ಪ್ರತಿಭಟನೆ

0
319

ಚಿಕ್ಕಮಗಳೂರು: ಕಮಿಷನ್ ಆರೋಪದ ಮೇಲೆ ಡೆತ್ ನೋಟ್ ಬರೆದಿಟ್ಟು ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ‌.ಎಸ್. ಈಶ್ವರಪ್ಪ ತಕ್ಷಣ ರಾಜೀನಾಮೆ ನೀಡುವಂತೆ ಒತ್ತಾಯಿಸಿ ನಗರಲ್ಲಿ ವಿವಿಧ ಪಕ್ಷ ಸಂಘಟನೆಗಳ ಆಶ್ರಯದಲ್ಲಿ ಪ್ರತಿಭಟನೆ ನಡೆಯಿತು.

ನಗರದ ಹನುಮಂತಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಭಾರತ ಕಮ್ಯುನಿಸ್ಟ್ ಪಕ್ಷ ‘ಕಾಂಗ್ರೆಸ್, ಜೆಡಿಎಸ್, ರೈತಸಂಘ, ದಲಿತ ಪರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಸಚಿವ ಈಶ್ವರಪ್ಪನವರ ವಿರುದ್ಧ ತಕ್ಷಣ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿದರು. ಸಚಿವ ಕೆ.ಎಸ್. ಈಶ್ವರಪ್ಪ ಶೇ. 40 ರಷ್ಟು ಕಮಿಷನ್ ಕೇಳಿದ್ದಾರೆಂಬ ಆರೋಪದ ಮೇಲೆ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದು, ಸಚಿವರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸುವಂತೆ ಆಗ್ರಹಿಸಿದರು.

ಜಾಹಿರಾತು

LEAVE A REPLY

Please enter your comment!
Please enter your name here