ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ ; ಈಶ್ವರಪ್ಪರವರನ್ನು ಬಂಧಿಸಲು ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

0
245

ಚಿಕ್ಕಮಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ರಾಜೀನಾಮೆ ನೀಡಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪರನ್ನು ಬಂಧಿಸಬೇಕು ಎಂದು ಆಗ್ರಹಿಸಿ ನಗರದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಕಾಂಗ್ರೆಸ್‌ನ ಪ್ರತಿಭಟನೆಗೆ ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಭಾಗವಹಿಸುವ ಮೂಲಕ ಸಾಥ್ ನೀಡುವ ಮೂಲಕ ಪ್ರತಿಭಟನೆಯನ್ನು ಕಿಚ್ಚನ್ನು ಹೊತ್ತಿಸಿದ್ದಾರೆ. ನಗರದ ಹನುಮಂತಪ್ಪ ವೃತ್ತದಿಂದ ಆಜಾದ್ ಪಾರ್ಕ್ ಸರ್ಕಲ್ ವರೆಗೂ ಪ್ರತಿಭಟನಾ ರ‍್ಯಾಲಿ ನಡೆದಿದ್ದು, ಈ ವೇಳೆ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.

ಈ ಪ್ರತಿಭಟನಾ ರ‍್ಯಾಲಿಯಲ್ಲಿ ಈಶ್ವರಪ್ಪ ಬಂಧನಕ್ಕೆ ಆಗ್ರಹದ ಜೊತೆಗೆ ಬೆಲೆ ಏರಿಕೆಯ ವಿರುದ್ಧವೂ ಘೋಷಣೆ ಕೂಗಲಾಯಿತು. ಅಲ್ಲದೇ, ಸಿಲಿಂಡರ್ ಅಣಕು ಶವಯಾತ್ರೆ ಮಾಡುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಲಾಯಿತು.

ಜಾಹಿರಾತು

LEAVE A REPLY

Please enter your comment!
Please enter your name here