ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾಕ್ಕೆ ಹಿಂದೂ ಅರ್ಚಕರ ನೇಮಿಸಲು ಸರ್ಕಾರಕ್ಕೆ ಕೋರ್ಟ್ ಸೂಚನೆ

0
429

ಚಿಕ್ಕಮಗಳೂರು: ತಾಲ್ಲೂಕಿನ ಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾಕ್ಕೆ ಹಿಂದೂ ಅರ್ಚಕರ ನೇಮಕ ಸಂಬಂಧ ಸೂಕ್ತ ನಿರ್ಧಾರ ತೆಗೆದುಕೊಳ್ಳುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.

ಇಲ್ಲಿನ ಪೂಜಾ ವಿಧಿ ವಿಧಾನಗಳಿಗೆ ಮುಜಾವರ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ 2018 ರ ಮಾ.18 ರಂದು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ನೇತೃತ್ವದ ಪೀಠ ರದ್ದುಪಡಿಸಿದೆ.

ಇದುವರೆಗೂ ದತ್ತಜಯಂತಿ ಸಮಯದಲ್ಲಿ ಮಾತ್ರ ಹಿಂದೂ ಅರ್ಚಕರಿಂದ ಪೂಜೆ ನೆರವೇರಿಸಲಾಗುತ್ತಿತ್ತು. ಕಾಯಂ ಹಿಂದೂ ಅರ್ಚಕರ ನೇಮಕಕ್ಕಾಗಿ ಹಿಂದೂ ಪರ ಸಂಘಟನೆಗಳು ಹಲವು ವರ್ಷಗಳಿಂದ ಹೋರಾಟ ಮಾಡಿಕೊಂಡು ಬಂದಿದ್ದವು. ಇದೀಗ ಹೈಕೋರ್ಟ್ ಅರ್ಚಕರ ನೇಮಕಕ್ಕೆ ಅನುಮತಿ ನೀಡಿದ್ದು, ರಾಜ್ಯ ಸರ್ಕಾರ ತೀರ್ಮಾನ ಕೈಗೊಳ್ಳಬೇಕಿದೆ.

ಮುಜರಾಯಿ ಇಲಾಖೆ ಆದೇಶವನ್ನು ಪ್ರಶ್ನಿಸಿ ದತ್ತ ಪೀಠ ಸಂವರ್ಧನಾ ಸಮಿತಿ ನ್ಯಾಯಾಲಯಕ್ಕೆ ತಕರಾರು ಅರ್ಜಿ ಸಲ್ಲಿಸಿತ್ತು. ಹಿಂದೂ ಸಂಘಟನೆಗಳ ಹೋರಾಟಕ್ಕೆ ಸಂದ ಮೊದಲ ಜಯ ಎಂದು ಹಿಂದೂಪರ ಸಂಘಟನೆಗಳು ತೀರ್ಪಿನ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸಿವೆ.

ಜಾಹಿರಾತು

LEAVE A REPLY

Please enter your comment!
Please enter your name here