ಗ್ರಾಪಂ ಅಧ್ಯಕ್ಷೆ ಸ್ಥಾನಕ್ಕೆ ರಾಜೀನಾಮೆ ನೀಡಿದ ವಿಶಾಲಾಕ್ಷಿ ಅಶೋಕ್ !

0
937

ಸಾಗರ: ತಾಲೂಕಿನ ತಾಳಗುಪ್ಪ ಹೋಬಳಿಯ ಮರತ್ತೂರು ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಸ್ಥಾನಕ್ಕೆ ವಿಶಾಲಾಕ್ಷಿ ಅಶೋಕ್ ಅವರು ರಾಜೀನಾಮೆ ಸಲ್ಲಿಸಿದ್ದಾರೆ.

ಈ ಕುರಿತಂತೆ ಸಾಗರದ ಉಪವಿಭಾಗಾಧಿಕಾರಿಗಳಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿರುವಂತ ಅವರು, ನಾನು 2021 ರ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸಾಗರ ತಾಲ್ಲೂಕು ತಾಳಗುಪ್ಪ ಹೋಬಳಿ ಮರತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಣಸೂರು-3 ಕ್ಷೇತ್ರದಿಂದ ಹಿಂದುಳಿದ ವರ್ಗ “ಅ” ಮಹಿಳೆ ಮೀಸಲಾತಿಯಲ್ಲಿ ಗೆದ್ದು, ನಂತರ 12-02-2021 ರಂದು ಮರತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಹುದ್ದೆಯನ್ನು ಅಲಂಕರಿಸಿ, ಇಲ್ಲಿಯವರೆಗೆ ಮರತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದೇನೆ. ಆದರೆ ಪ್ರಸ್ತುತ ಸಂದರ್ಭದಲ್ಲಿ ನನ್ನ ಆರೋಗ್ಯ ಸರಿಯಿಲ್ಲದ ಕಾರಣ, ಅಧ್ಯಕ್ಷೆ ಹುದ್ದೆಯಲ್ಲಿ ಮುಂದುವರೆಯಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ನಾನು ಸ್ವಇಚ್ಛೆಯಿಂದ ಮರತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಹುದ್ದೆಗೆ ರಾಜೀನಾಮೆಯನ್ನು ಸಲ್ಲಿಸುತ್ತಿದ್ದು, ಸದರಿ ರಾಜೀನಾಮೆಯನ್ನು ಅಂಗೀಕರಿಸಬೇಕಾಗಿ ಈ ಮೂಲಕ ತಮ್ಮಲ್ಲಿ ಗೌರವ ಪೂರ್ವಕವಾಗಿ ವಿನಂತಿಸಿಕೊಳ್ಳುತ್ತೇನೆ ಎಂದು ಉಲ್ಲೇಖಿಸಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here