ಗ್ರಾಪಂ ಮಟ್ಟದಲ್ಲಿ ಕುಡಿಯುವ ನೀರು ಅಭಾವವಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಶಾಸಕ ಹರತಾಳು ಹಾಲಪ್ಪ

0
386

ಹೊಸನಗರ: ತಾಲ್ಲೂಕಿನ 30 ಗ್ರಾಮ ಪಂಚಾಯಿತಿಗಳಲ್ಲಿ ಅಲ್ಲಿನ ಗ್ರಾಮಸ್ಥರಿಗೆ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಕಾರ್ಯಪ್ರವೃತ್ತರಾಗಬೇಕು ಎಂದು ಹೊಸನಗರ-ಸಾಗರ ಕ್ಷೇತ್ರದ ಶಾಸಕರಾದ ಹರತಾಳು ಹಾಲಪ್ಪನವರು ಹೇಳಿದರು.

ಹೊಸನಗರದ ತಾಲ್ಲೂಕು ಪಂಚಾಯಿತಿಯ ಆವರಣದಲ್ಲಿ ಗ್ರಾಮ ಪಂಚಾಯಿತಿಯ ಪಿಡಿಓ ಹಾಗೂ ಅಧ್ಯಕ್ಷರ ಸಭೆಯಲ್ಲಿ ಪಿಡಿಓಗಳಿಗೆ ತಾಕೀತು ಮಾಡಿದರು.

ಇನ್ನೂ ಮಳೆಗಾಲ ಪ್ರಾರಂಭವಾಗಲು ಕೇವಲ 2 ತಿಂಗಳು ಉಳಿದಿದೆ ಈ ಬಾರಿ ಕುಡಿಯುವ ನೀರಿಗೆ ತೊಂದರೆಯಾಗುವುದಿಲ್ಲ ಎಂಬುದು ನನ್ನ ಅನಿಸಿಕೆ ಆದರೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ತೊಂದರೆ ಆದಲ್ಲಿ ಅಧ್ಯಕ್ಷರು ಪಿಡಿಓಗಳು ತಕ್ಷಣ ಗ್ರಾಮಸ್ಥರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು 15ನೇ ಹಣಕಾಸು ಯೋಜನೆಯ ಹಣವನ್ನು ಉಪಯೋಗಿಸಿಕೊಂಡು ತುರ್ತು ಸೇವೆ ಕೈಗೊಳ್ಳಬೇಕೆಂದರು.

ಕೋವಿಡ್ ಲಸಿಕೆ ಹಾಕಿಸಿಕೊಳ್ಳುವುದರಿಂದ ತೊಂದರೆಯಿಲ್ಲ:

ಹೊಸನಗರ ತಾಲ್ಲೂಕಿನಲ್ಲಿ ಕೋವಿಡ್ ಲಸಿಕೆ ಇಲ್ಲಿಯವರೆವಿಗೆ ಕೊರತೆಯಾಗಿಲ್ಲ ಅದು ಅಲ್ಲದೇ ಗ್ರಾಮ ಪಂಚಾಯಿತಿಯ ಮಟ್ಟದಲ್ಲಿ ಪ್ರತಿದಿನ ಒಂದೊಂದು ಗ್ರಾಮಗಳಲ್ಲಿ ಲಸಿಕೆ ಹಾಕುವ ಕಾರ್ಯ ನಡೆಯುತ್ತಿದೆ ಇಲ್ಲಿಯವರೆವಿಗೆ ಸುಮಾರು 14 ಸಾವಿರ ಜನರಿಗೆ ಲಸಿಕೆಯನ್ನು ಹಾಕಲಾಗಿದೆ ಎಂದು ಹೊಸನಗರ ತಾಲ್ಲೂಕು ಆರೋಗ್ಯಾಧಿಕಾರಿ ಸುರೇಶ್‌ರವರು ಸಭೆಯ ಗಮನಕ್ಕೆ ತಂದರು. ಈ ಸಂದರ್ಭದಲ್ಲಿ ಶಾಸಕರು ಮಾತನಾಡಿ, ಹೊಸನಗರ ತಾಲ್ಲೂಕಿನ ಪ್ರತಿಯೊಬ್ಬರು ಕೋವಿಡ್ ಲಸಿಕೆಯನ್ನು ಹಾಕಿಸಿಕೊಳ್ಳಿ ಕೋವಿಡ್ ಲಸಿಕೆ ಹಾಕಿಸಿಕೊಳ್ಳುವುದರಿಂದ ಯಾವುದೇ ಅಪಾಯವಿಲ್ಲ 45 ವರ್ಷ ಮೇಲ್ಪಟ್ಟವರು ಪ್ರತಿಯೊಬ್ಬರು ಲಸಿಕೆಯನ್ನು ಹಾಕಿಸಿಕೊಳ್ಳಿ ಎಂದರು.

ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಆಲವಳ್ಳಿ ವೀರೇಶ್, ಜಿಲ್ಲಾ ಪಂಚಾಯಿತಿ ಸದಸ್ಯ ಸುರೇಶ್ ಸ್ವಾಮಿರಾವ್, ತಾಲ್ಲೂಕು ಪಂಚಾಯಿತಿ ಸದಸ್ಯ ಎರಗಿ ಉಮೇಶ್, ಶಾಸಕರ ಆಪ್ತ ಕಾರ್ಯದರ್ಶಿ ಮಂಡಾನಿ ಮೋಹನ್, ಚಂದ್ರಪ್ಪ, ಆರೋಗ್ಯಾಧಿಕಾರಿ ಸುರೇಶ್ ಹಾಗೂ ಗ್ರಾಮ ಪಂಚಾಯಿತಿಯ ಪಿಡಿಓಗಳು ಗ್ರಾಮ ಪಂಚಾಯಿತಿಯ ಅಧ್ಯಕ್ಷರುಗಳು ಉಪಸ್ಥಿತರಿದ್ದರು.

ಜಾಹಿರಾತು

LEAVE A REPLY

Please enter your comment!
Please enter your name here