ಗ್ರಾಪಂ ಸಭೆಯಲ್ಲೇ ಬಡಿದಾಡಿಕೊಂಡ ಇಬ್ಬರು ಸದಸ್ಯರು !

0
1056

ತೀರ್ಥಹಳ್ಳಿ: ತಾಲ್ಲೂಕಿನ ಕೋಣಂದೂರಿನಲ್ಲಿ ಗುರುವಾರ ಬೆಳಗ್ಗೆ ಸಾಮಾನ್ಯ ಸಭೆ ನಡೆಯುತ್ತಿದ್ದ ವೇಳೆ ಇಬ್ಬರು ಗ್ರಾಮ ಪಂಚಾಯತ್ ಸದಸ್ಯರು ಹೊಡೆದಾಡಿಕೊಂಡು ಆಸ್ಪತ್ರೆ ಸೇರಿರುವ ಘಟನೆ ನಡೆದಿದೆ.

ಕಾಂಗ್ರೆಸ್ ಪಕ್ಷದ ಬೆಂಬಲಿತ ಸದಸ್ಯ ಸುರೇಶ್ ಮತ್ತು ಬಿಜೆಪಿ ಬೆಂಬಲಿತ ಸದಸ್ಯ ಪೂರ್ಣೇಶ್ ಇಬ್ಬರ ನಡುವೆ ಕೆರೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಮಾತಿನ ಚಕಮಕಿ ನಡೆದು ಇಬ್ಬರು ಕೈ ಕೈ ಮಿಲಾಯಿಸಿಕೊಂಡಿದ್ದಾರೆ.

ಘಟನೆಯಲ್ಲಿ ಸುರೇಶ್ ಅವರಿಗೆ ಗಂಭೀರ ಗಾಯವಾಗಿದ್ದು, ತೀರ್ಥಹಳ್ಳಿ ಜೆಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಪೂರ್ಣೇಶ್ ಅವರು ಕೋಣಂದೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಘಟನೆ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಜಾಹಿರಾತು

LEAVE A REPLY

Please enter your comment!
Please enter your name here