24.3 C
Shimoga
Friday, December 9, 2022

ಗ್ರಾ.ಪಂ ಉಪಚುನಾವಣೆ ; ಸಂತೆ ಜಾತ್ರೆ ನಿಷೇಧ


ಶಿವಮೊಗ್ಗ : ಗ್ರಾಮ ಪಂಚಾಯ್ತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ/ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಯನ್ನು ನಡೆಸುವ ಸಂಬಂಧ ವೇಳಾಪಟ್ಟಿ ಪ್ರಕಟವಾಗಿದ್ದು, ಸಾಗರ ತಾಲ್ಲೂಕಿನ ಅರಲಗೋಡು ಗ್ರಾ.ಪಂ ಯ ಕುರುಮನೆ ಕ್ಷೇತ್ರದಲ್ಲಿ ದಿ: 28-10.22 ರಂದು ಉಪಚುನಾವಣೆ ನಡೆಯಲಿದೆ.

ಚುನಾವಣಾ ವ್ಯಾಪ್ತಿಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಂದು ಬೆಳಿಗ್ಗೆ 5 ಗಂಟೆಯಿಂದ ಸಂಜೆ 7 ಗಂಟೆವರೆಗೆ ಸಂತೆ ಮತ್ತು ಎಲ್ಲಾ ತರಹದ ಜಾತ್ರೆಗಳನ್ನು ನಡೆಸದಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ.ಸೆಲ್ವಮಣಿ ಆರ್ ಆದೇಶಿಸಿದ್ದಾರೆ.

- Advertisement -

More articles

LEAVE A REPLY

Please enter your comment!
Please enter your name here

- Advertisement -

Latest article

error: Content is protected !!