ರಿಪ್ಪನ್ಪೇಟೆ: ಪಠ್ಯಪುಸ್ತಕದಲ್ಲಿ ರಾಷ್ಟ್ರಕವಿ ಕುವೆಂಪುರವರನ್ನು ಅವಮಾನಿಸುವ ರೀತಿಯಲ್ಲಿ ಪಠ್ಯಪುಸ್ತಕವನ್ನು ವಿದ್ಯಾರ್ಥಿಗಳಿಗೆ ಹೊರತರಲಾಗಿದ್ದು ತಕ್ಷಣ ಈ ಪಠ್ಯಪುಸ್ತಕವನ್ನು ರದ್ದುಗೊಳಿಸಬೇಕು ಹಾಗೂ ಈ ಹಿಂದೆ ಇದ್ದ ಪಠ್ಯಪುಸ್ತಕವನ್ನು ವಿದ್ಯಾರ್ಥಿಗಳಿಗೆ ನೀಡಬೇಕು ಅದರ ಜೊತೆಗೆ ಕರ್ನಾಟಕ ರಾಜ್ಯ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯಿಂದ ರೋಹಿತ್ ಚಕ್ರತೀರ್ಥರವರನ್ನು ವಜಾ ಮಾಡುವುದರ ಜೊತೆಗೆ ದೇಶದ್ರೋಹ ಕೇಸ್ ಹಾಕಿ ಜೈಲಿಗೆ ಕಳುಹಿಸಬೇಕೇಂದು ರಾಜ್ಯ ಜೆಡಿಎಸ್ ಮಾಜಿ ಪ್ರಧಾನ ಕಾರ್ಯದರ್ಶಿ ಆರ್.ಎ.ಚಾಬುಸಾಬ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ರಿಪ್ಪನ್ಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯ ಸರ್ಕಾರಕ್ಕೆ ಕಳುಹಿಸಲಾದ ಮನವಿ ಪತ್ರದಲ್ಲಿ ರೋಹಿತ್ ಚಕ್ರತೀರ್ಥನು ಒಬ್ಬ ಅಪ್ರಬುದ್ದ ಹಾಗೂ ನಾಡಪ್ರಜ್ಞೆ ಇಲ್ಲದ ವ್ಯಕ್ತಿಯಾಗಿದ್ದಾರೆ. ಈತನ ಮಾತು ಮತ್ತು ಬರಹಗಳು ದೇಶದ ಸಂವಿಧಾನದ ಆಶಯಗಳಿಗೆ ಹಾಗೂ ಬಹುತ್ವಕ್ಕೆ ವಿರುದ್ದವಾಗಿದೆ. ಹೀಗಾಗಿ ನಾಡು ಮತ್ತು ದೇಶದ ಅಶಾಂತಿಗೆ ಕಾರಣವಾಗುತ್ತಿರುವ ಈತನನ್ನು ಅತ್ಯಂತ ಜವಾಬ್ದಾರಿಯುತವಾದ ಹುದ್ದೆಗೆ ನೇಮಿಸಿರುವುದು ಸರ್ಕಾರದ ತಪ್ಪು ಹೆಜ್ಜೆಯಾಗಿದೆ. ಹೀಗಾಗಿ ರಾಜ್ಯಪಾಲರು ಮಧ್ಯಪ್ರವೇಶಿಸಿ ರೋಹಿತ್ ಚಕ್ರತೀರ್ಥನನ್ನು ವಜಾ ಮಾಡಲಿ ಎಂದರು.
ಈ ಸಂದರ್ಭದಲ್ಲಿ ತಾಲ್ಲೂಕ್ ಜೆಡಿಎಸ್ ಅಧ್ಯಕ್ಷ ಎನ್.ವರ್ತೇಶ್, ಜೆಡಿಎಸ್ ಮುಖಂಡ ಆರ್.ಎನ್.ಮಂಜುನಾಥ, ಟಿ.ಆರ್.ಕೃಷ್ಣಪ್ಪ, ರಾಜಾರಾಮ ಯಡೂರು ಇನ್ನಿತರರು ಹಾಜರಿದ್ದರು.
Related