ಚಲಿಸುತಿದ್ದ ಕಾರಿನ ಟೈರ್ ಸ್ಫೋಟ ; ಇಬ್ಬರ ದುರ್ಮರಣ !

0
942

ಕೊಪ್ಪ : ತಡರಾತ್ರಿ ಚಲಿಸುತ್ತಿದ್ದ ಕಾರಿನ ಟೈರ್ ಸ್ಫೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಹೊಂಡಕ್ಕೆ ಕಾರು ಉರುಳಿ ಬಿದ್ದು ಇಬ್ಬರು ಪ್ರಯಾಣಿಕರು ಮೃತಪಟ್ಟ ಘಟನೆ ನಡೆದಿದೆ.

ತಾಲ್ಲೂಕಿನ ಹರಿಹರಪುರ ಬಳಿ ಈ ಘಟನೆ ಸಂಭವಿಸಿದ್ದು, ಕಾರಿನಲ್ಲಿ ಒಟ್ಟು ನಾಲ್ವರು ಪ್ರಯಾಣಿಕರು ಸಂಚಾರ ನಡೆಸುತ್ತಿದ್ದರು ಅದರಲ್ಲಿ ಇಬ್ಬರು ಸಾವನ್ನಪ್ಪಿದ್ದರೆ ಇನ್ನಿಬ್ಬರು ಗಾಯಗೊಂಡಿದ್ದಾರೆ.

ಸಾವನ್ನಪ್ಪಿದವರನ್ನು ಆಲ್ದೂರಿನ ಮಣಿಕಂಠ (37) ಹಾಗೂ ಕೊಪ್ಪದ ಗುಣವಂತೆ ಮೆಡಿಕಲ್ ನ ಮಾಲೀಕರಾದ ರಾಜಶೇಖರ (51) ಎಂದು ಗುರುತಿಸಲಾಗಿದ್ದು, ಈ ಕುರಿತು ಹರಿಹರಪುರ ಪೊಲೀಸ್ ಠಾಣಾ ಸಿಬ್ಬಂದಿಗಳು ಸ್ಥಳ ಪರಿಶೀಲನೆ ನಡೆಸಿ ಘಟನೆಗೆ ನಿಖರ ಕಾರಣಗಳೇನು ಎಂದು ತನಿಖೆ ನಡೆಸುತ್ತಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here