ಚಾಕು ಇರಿತ ಪ್ರಕರಣ ; ಆರೋಪಿ ಕಾಲಿಗೆ ಫೈರಿಂಗ್ !

0
1277

ಶಿವಮೊಗ್ಗ: ನಗರದಲ್ಲಿ ಪ್ರೇಮ್ ಸಿಂಗ್ ಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.

ಕಾಲಿಗೆ ಗುಂಡು ಹಾರಿಸಿ ಆರೋಪಿ ಜಬಿವುಲ್ಲಾನನ್ನು ಬಂಧಿಸಲಾಗಿದೆ. ಶಿವಮೊಗ್ಗದ ತೀರ್ಥಹಳ್ಳಿ ರಸ್ತೆಯಲ್ಲಿ ತಡರಾತ್ರಿ ಈ ಘಟನೆ ನಡೆದಿದೆ.

ನಮೋ ಶಂಕರ ಲೇಔಟ್ ನಲ್ಲಿ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಆರೋಪಿ ಜಬಿವುಲ್ಲಾ ಬಂಧನಕ್ಕೆ ಪೊಲೀಸರು ತೆರಳಿದ್ದ ವೇಳೆಯಲ್ಲಿ ಪೊಲೀಸರ ಮೇಲೆಯೇ ಹಲ್ಲಿಗೆ ಯತ್ನಿಸಿ ಪರಾರಿಯಾಗಲು ಮುಂದಾಗಿದ್ದಾನೆ. ಈ ವೇಳೆ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ. ವಿನೋಬನಗರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಮಂಜುನಾಥ ಕುರಿ ಫೈರಿಂಗ್ ಮಾಡಿದ್ದಾರೆ.

ಜಬೀವುಲ್ಲಾನನ್ನು ವಶಕ್ಕೆ ಪಡೆದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈಗಾಗಲೇ ದೊಡ್ಡಪೇಟೆ ಠಾಣೆ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ನದೀಮ್ ಮತ್ತು ಅಬ್ದುಲ್ ರೆಹಮಾನ್ ಅವರನ್ನು ಬಂಧಿಸಿದ್ದಾರೆ. ಸಾವರ್ಕರ್ ಫ್ಲೆಕ್ಸ್ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದ ಹಿನ್ನಲೆಯಲ್ಲಿ ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಪ್ರೇಮ್ ಸಿಂಗ್ ಮೇಲೆ ಚೂರಿ ಇರಿತದ ಪ್ರಕರಣದಲ್ಲಿ ಇಲ್ಲಿಯವರೆಗೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here