ಮೂಡಿಗೆರೆ: ತಾಲ್ಲೂಕಿನಲ್ಲಿ ಹಾದು ಹೋಗಿರುವ ಚಾರ್ಮಾಡಿ ಘಾಟಿಯಲ್ಲಿ ಘನವಾಹನಗಳಿಗೆ ರಸ್ತೆ ಸಂಚಾರಕ್ಕೆ ಅವಕಾಶ ಕಲ್ಪಿಸಿ ಜಿಲ್ಲಾಡಳಿತವು ಬುಧವಾರ ಹೊರಡಿಸಿದ್ದ ಆದೇಶವನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿದೆ.
ಚಾರ್ಮಾಡಿ ಘಾಟಿಯ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಘನವಾಹನಗಳು ಸಂಚರಿಸಿದರೆ ಕಾಮಗಾರಿ ನಡೆಸಲು ಅಡ್ಡಿಯಾಗುವುದರಿಂದ ಹಾಗೂ ವಾಹನ ದಟ್ಟಣೆಯುಂಟಾಗಿ ಅಪಘಾತಗಳು ಸಂಭವಿಸುವ ಅಪಾಯವಿರುವುದರಿಂದ ಪ್ರಯಾಣಿಕರು ಹಾಗೂ ಸಾರ್ವಜನಿಕರ ಹಿತದೃಷ್ಟಿಯ ಹಿನ್ನೆಲೆಯಲ್ಲಿ ಸಂಚಾರಕ್ಕೆ ಅವಕಾಶ ಕಲ್ಪಿಸಿ ಮಾ. 17ರಂದು ಹೊರಡಿಸಲಾಗಿದ್ದ ಆದೇಶವನ್ನು ತಾತ್ಕಲಿಕವಾಗಿ ತಡೆಹಿಡಿಯಲಾಗಿದೆ’ ಎಂದು ಜಿಲ್ಲಾಡಳಿತ ತಿಳಿಸಿದೆ.
ವಾಹನ ಸಂಚಾರಕ್ಕೆ ಅವಕಾಶ ನೀಡಿದ್ದ ಆದೇಶವನ್ನು ಗುರುವಾರ ರದ್ದುಗೊಳಿಸಿರುವುದರಿಂದ ಚಾರ್ಮಾಡಿ ಘಾಟಿ ಮಾರ್ಗವಾಗಿ ಸಂಚರಿಸುವ ಪ್ರಯಾಣಿಕರು ತೊಂದರೆ ಅನುಭವಿಸುವಂತಾಯಿತು.
Related