ಚಾರ್ಮಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಮತ್ತೆ ಜಿಲ್ಲಾಧಿಕಾರಿಗಳಿಂದ ಅನುಮತಿ

0
528

ಚಿಕ್ಕಮಗಳೂರು: ಕಳೆದ ಕೆಲ ದಿನಗಳ ಹಿಂದೆ ಕೆ.ಎಸ್.ಆರ್.ಟಿ.ಸಿ ಬಸ್ ಸೇರಿದಂತೆ ಇತರೆ ವಾಹನಗಳು ಚಾರ್ಮಾಡಿ ಘಾಟ್ ರಸ್ತೆ ಸಂಚರಿಸಲು ಅನುಮತಿ ನೀಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಒತ್ತಡಕ್ಕೆ ಮಣಿದು ಒಂದೇ ದಿನದಲ್ಲಿ ವಾಪಸ್ ಪಡೆದಿದ್ದರೂ, ಈಗ ಜಿಲ್ಲಾಧಿಕಾರಿಗಳು ಮತ್ತೆ ಚಾರ್ಮಾಡಿ ರಸ್ತೆಯಲ್ಲಿ ಘನ ವಾಹನ ಸಂಚರಿಸಲು ಅನುಮತಿ ನೀಡಿದ್ದಾರೆ. ಈ ಆದೇಶವು ಮುಂದಿನ ಆದೇಶವು ಮಳೆಗಾಲದವರೆಗೆ ಜಾರಿಯಲ್ಲಿರುತ್ತದೆ. ಮಳೆಗಾಲದಲ್ಲಿನ ಪರಿಸ್ಥಿತಿ ನೋಡಿ ಮುಂದಿನವರಿಸಲಾಗುವು ಎಂದು ಜಿಲ್ಲಾಧಿಕಾರಿ ಕೆ.ಎನ್ ರಮೇಶ್ ತೀಳಿಸಿದ್ದಾರೆ.

ಪ್ರಸ್ತಾಪಿತ ಮಾರ್ಗದಲ್ಲಿ ಅಗತ್ಯವಿರುವ ಸ್ಥಳಗಳಲ್ಲಿನ ಸೂಚನಾ ಫಲಕಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಹಾಗೂ ಯಾವುದೇ ರೀತಿಯ ಅಪಘಾತಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮಗಳನ್ನು ಅಧಿಕಾರಿಗಳು ಕೈಗೊಳ್ಳಬೇಕು.‌‌ ಚಾರ್ಮಾಡಿ ಘಾಟ್ ಭಾಗದಲ್ಲಿ ಬಹಳಷ್ಟು ಕಡೆ ಭೂಕುಸಿತದಿಂದ ರಸ್ತೆಗೆ ತೀವ್ರತರವಾದ ದಕ್ಕೆ ಉಂಟಾಗಿರುವುದರಿಂದ ಚಾಲಕರು ಅತ್ಯಂತ ಜಾಗರೂಕತೆಯಿಂದ ವೇಗದ ಮಿತಿಯೊಂದಿಗೆ ವಾಹನಗಳು ಚಲಾಯಿಸಬೇಕು ಎಂದು ಸೂಚಿಸಿದರು.

ಕೆ.ಎಸ್.ಆರ್.ಟಿ.ಸಿ ಕೆಂಪು ಬಸ್, ಆರು ಚಕ್ರದ ಲಾರಿ, ನಾಲ್ಕು ಚಕ್ರದ ವಾಹನಗಳು, ಟೆಂಪೊ ಟ್ರಾವೇಲರ್, ಅಂಬುಲೆನ್ಸ್, ಕಾರು, ಜೀಪು, ವ್ಯಾನ್, ಎಲ್.ಸಿ.ವಿ (ಮಿನಿ ವ್ಯಾನ್) ಹಾಗೂ ದ್ವಿಚಕ್ರ ವಾಹನಗಳು ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ.

ಬುಲೆಟ್ ಟ್ಯಾಂಕರ್‍ಸ್, ಶೀಫ್ಟ್ ಕಾರ್ಗೊ ಕಂಟೈನರ್ಸ್ ಹಾಗೂ ಲಾಂಗ್ ಚಾಸಿಸ್ ವಾಹನಗಳು, ಹೆವಿ ಕಮರ್ಷಿಯಲ್ ವೆಹಿಕಲ್ಸ್, ಮಲ್ಟಿ ಎಕ್ಸೆಲ್ ಟ್ರಕ್ ಟೈಲರ್, ಕೆ.ಎಸ್.ಆರ್.ಟಿ.ಸಿ ರಾಜಹಂಸ ಬಸ್ ಮತ್ತು ಎಲ್ಲಾ ಬಗೆಯ ಅಧಿಕ ಭಾರದ ಸರಕು ಸಾಗಾಣೆಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ ಎಂದು ಹೇಳಿದರು.

ಜಾಹಿರಾತು

LEAVE A REPLY

Please enter your comment!
Please enter your name here