ಚಾರ್ಮಾಡಿ ರಸ್ತೆ ವಾಹನ ಸಂಚಾರಕ್ಕೆ ಅವಕಾಶ: ಜಿಲ್ಲಾಧಿಕಾರಿ ಕೆ.ಎನ್ ರಮೇಶ್

0
2088

ಚಿಕ್ಕಮಗಳೂರು: ಕಳೆದ ಎರಡು ವರ್ಷಗಳ ಹಿಂದೆ ಭಾರಿ ಮಳೆಯಿಂದ ಗುಡ್ಡ ಮತ್ತು ಭೂ ಕುಸಿತ ಉಂಟಾಗಿದ್ದ ಚಾರ್ಮಾಡಿ ರಸ್ತೆ (ರಾಷ್ಟ್ರೀಯ ಹೆದ್ದಾರಿ-73 ಹಳೆಯ ಸಂಖ್ಯೆ 234) ಮಾರ್ಗದಲ್ಲಿ ಲಘು ಹಾಗೂ ಕೆಲವು ಘನ ವಾಹನಗಳ ಅವಕಾಶ ಕಲ್ಪಿಸಲಾಗಿದೆ. ಈ ಆದೇಶವು ಮುಂದಿನ ಆದೇಶದವರೆಗೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿಗಳು ಕೆ.ಎನ್.ರಮೇಶ್ ಆದೇಶ ಹೊರಡಿಸಿದ್ದಾರೆ.

ಈ ಆದೇಶದಂತೆ ಪ್ರಸ್ತಾಪಿತ ಮಾರ್ಗದಲ್ಲಿ ಅಗತ್ಯವಿರುವ ಸ್ಥಳಗಳಲ್ಲಿ ರಾಷ್ಟ್ರೀಯ ಹೆದ್ದಾರಿ ವಿಭಾಗ ಹಾಸನರವರು ಸೂಚನಾ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸತಕ್ಕದ್ದು ಹಾಗೂ ಈ ಮಾರ್ಗದಲ್ಲಿ ಯಾವುದೇ ರೀತಿಯ ಅಪಘಾತಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಮತ್ತು ಚಾರ್ಮಾಡಿ ಘಾಟ್ ಭಾಗದಲ್ಲಿ ಬಹಳಷ್ಟು ಕಡೆ ಭೂಕುಸಿತದಿಂದ ರಸ್ತೆಗೆ ತೀವ್ರತರವಾದ ದಕ್ಕೆ ಉಂಟಾಗಿರುವುದರಿಂದ ಅತ್ಯಂತ ಜಾಗರೂಕತೆಯಿಂದ ನಿಗಧಿತ ವೇಗದ ಮಿತಿಯೊಂದಿಗೆ ವಾಹನಗಳು ಸಂಚರಿಸಲು ಸೂಚಿಸಿದರೆ.

ಸಂಚರಿಸಬಹುದಾದ ಲಘು ವಾಹನಗಳು:

ಕೆ.ಎಸ್.ಆರ್.ಟಿ.ಸಿ ಕೆಂಪು ಬಸ್, ಆರು ಚಕ್ರದ ಲಾರಿ, ನಾಲ್ಕು ಚಕ್ರದ ವಾಹನಗಳು, ಟೆಂಪೊ ಟ್ರಾವೇಲರ್, ಅಂಬುಲೆನ್ಸ್, ಕಾರು, ಜೀಪು, ವ್ಯಾನ್, ಎಲ್.ಸಿ.ವಿ (ಮಿನಿ ವ್ಯಾನ್) ಹಾಗೂ ದ್ವಿಚಕ್ರ ವಾಹನಗಳು ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ.

ನಿರ್ಬಂಧಿತ ವಾಹನಗಳು:

ಬಾರಿ ಘನ ವಾಹನಗಳಾದ ಬುಲೆಟ್ ಟ್ಯಾಂಕರ್‍ಸ್, ಶೀಫ್ಟ್ ಕಾರ್ಗೊ ಕಂಟೈನರ್ಸ್ ಹಾಗೂ ಲಾಂಗ್ ಚಾಸಿಸ್ ವಾಹನಗಳು, ಹೆವಿ ಕಮರ್ಷಿಯಲ್ ವೆಹಿಕಲ್ಸ್, ಮಲ್ಟಿ ಎಕ್ಸೆಲ್ ಟ್ರಕ್ ಟೈಲರ್, ಕೆ.ಎಸ್.ಆರ್.ಟಿ.ಸಿ ರಾಜಹಂಸ ಬಸ್ ಮತ್ತು ಎಲ್ಲಾ ಬಗೆಯ ಅಧಿಕ ಭಾರದ ಸರಕು ಸಾಗಾಣೆಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here