ಚಾಲಕನ‌ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ !

0
1875

ಹೊಸನಗರ : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ 31 ಮಂದಿ ಗಾಯಗೊಂಡಿರುವ ಘಟನೆ ತಾಲೂಕಿನ ಕರಕೆಹಕ್ಲು ಗ್ರಾಮದ ಬಳಿ ನಡೆದಿದೆ.

ಬೆಂಗಳೂರಿನಿಂದ ತೀರ್ಥಹಳ್ಳಿ ಮೂಲಕ ಭಟ್ಕಳಕ್ಕೆ ತೆರಳುತ್ತಿದ್ದ ಬಸ್ ಇಂದು ಬೆಳಗಿನ ಜಾವ 5 ಗಂಟೆ ಸುಮಾರಿಗೆ ನಿದ್ದೆಯ ಮಂಪರಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ.

ಗಾಯಾಳುಗಳನ್ನು ಚಿಕಿತ್ಸೆಗಾಗಿ ಹೊಸನಗರ ಹಾಗೂ ತೀರ್ಥಹಳ್ಳಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾದ ಕಾರಣ ಎಲ್ಲರೂ ಪ್ರಥಮ ಚಿಕಿತ್ಸೆ ಪಡೆದು ತಮ್ಮೂರಿಗೆ ವಾಪಸ್ ಆಗಿದ್ದಾರೆ ಎಂದು ತಿಳಿದುಬಂದಿದೆ.

ಜಾಹಿರಾತು

LEAVE A REPLY

Please enter your comment!
Please enter your name here