ಚಾಲಕನ ನಿಯಂತ್ರಣ ತಪ್ಪಿ ಉರುಳಿದ ಟ್ರ್ಯಾಕ್ಸ್ ; ಪ್ರಯಾಣಿಕರಿಗೆ ಗಾಯ

0
318

ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ ವಾಹನವೊಂದು ಉರುಳಿದ ಪರಿಣಾಮ ವಾಹನದಲ್ಲಿ ಪ್ರಯಾಣಿಸುತ್ತಿದವರಿಗೆ ಗಾಯವಾಗಿರುವ ಘಟನೆ ತಾಲ್ಲೂಕಿನ ಕೊಟ್ಟಿಗೆಹಾರ ಸಮೀಪ ನಡೆದಿದೆ.

ಸುಮಾರು 13 ಜನ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಕೆಲವರಿಗೆ ಗಾಯಗಳಾಗಿದೆ.

ಕೊಟ್ಟಿಗೆಹಾರದ ರಾಷ್ಟ್ರೀಯ ಹೆದ್ದಾರಿ ದರ್ಬಾರ್ ಹೋಟೆಲ್ ಬಳಿ ಈ ಘಟನೆ ನಡೆದಿದ್ದು, ಸಣ್ಣ – ಪುಟ್ಟ ಗಾಯವಾಗಿದ್ದವರನ್ನು ಸ್ಥಳೀಯರ ಸಹಕಾರದಿಂದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಗಾಯಾಳುಗಳು ಧರ್ಮಸ್ಥಳಕ್ಕೆ ಹೋಗಿ ಬರುತ್ತಿದ್ದ ರಾಣೆಬೆನ್ನೂರಿನ ಮೂಲದವರು ಎನ್ನಲಾಗಿದೆ.

ಬಣಕಲ್ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here