ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರಳಿ ಬಿದ್ದ ಕಾರು! ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ

0
1304

ಮೂಡಿಗೆರೆ: ತಾಲ್ಲೂಕಿನ ಚಾರ್ಮಾಡಿ ಘಾಟ್ ನ ಎಂಟನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಂದಕಕ್ಕೆ ಉರಳಿ ಬಿದ್ದಿರುವ ಘಟನೆ ವರದಿಯಾಗಿದೆ.

ಜಗದೀಶ್ ಎನ್ನುವವರು ತಮ್ಮ ಮಾರುತಿ ಕಾರಿನಲ್ಲಿ ಬಾಡಿಗೆ ಆಧಾರದಲ್ಲಿ ಪ್ರಯಾಣಿಕರನ್ನು ಹೊತ್ತು ಮೂಡಿಗೆರೆಯಿಂದ ಉಜಿರೆಗೆ ತೆರಳುತ್ತಿದ್ದ ಸಂದರ್ಭ ಘಾಟ್ ನ ಎಂಟನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದಿದೆ.

ಕಾರಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದ್ದು ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಲಾಗಿದೆ‌.

ಈ ಘಟನೆಯಿಂದ ಸ್ಥಳದಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದರಿಂದ ಘಾಟಿಯಲ್ಲಿ ಕೇಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿ ಸಂಚಾರ ಅಸ್ತವ್ಯಸ್ಥವಾಗಿತ್ತು.

ಜಾಹಿರಾತು

LEAVE A REPLY

Please enter your comment!
Please enter your name here