ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ !

0
14847

ಸಾಗರ: ಚಾಲಕನ ನಿಯಂತ್ರಣ ತಪ್ಪಿದ ಶ್ರೀ ಗಜಾನನ ಬಸ್ ರಸ್ತೆ ಪಕ್ಕಕ್ಕೆ ಪಲ್ಟಿಯಾಗಿದ ಘಟನೆ ತಾಳಗುಪ್ಪ ಸಮೀಪದ ಬಲೇಗಾರ್ ಕ್ರಾಸ್ ಬಳಿ ಇಂದು ಬೆಳಗ್ಗೆ ನಡೆದಿದೆ.

ಬಸ್ಸಿನಲ್ಲಿ ನಾಲ್ವರು ಪ್ರಯಾಣಿಕರಿದ್ದು ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಭಟ್ಕಳದಿಂದ ಬೈಂದೂರಿಗೆ ತೆರಳುತ್ತಿದ್ದ ಬಸ್ ತಾಂತ್ರಿಕ ದೋಷದಿಂದ ಚಾಲಕ ನಿಯಂತ್ರಣ ತಪ್ಪಿದೆ ಎಂದು ಹೇಳಲಾಗಿದ್ದು, ಬಸ್ ಪಲ್ಟಿಯಾಗುತ್ತಿದ್ದಂತೆ ಸ್ಥಳೀಯರು ಮತ್ತು ವಾಹನ ಸವಾರರು ಕೂಡಲೆ ನೆರವಿಗೆ ಧಾವಿಸಿ ಪ್ರಯಾಣಿಕರನ್ನು ಬಸ್ಸಿನಿಂದ ಹೊರತಂದಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here