ಚಾಲಕನ ನಿಯಂತ್ರಣ ತಪ್ಪಿ ಬೊಲೆರೋ ವಾಹನ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು, ಇಬ್ಬರ ಸ್ಥಿತಿ ಗಂಭೀರ !

0
5513

ಶಿವಮೊಗ್ಗ: ಬೊಲೆರೋ ಪಿಕಪ್ ವಾಹನವೊಂದು ನಿಯಂತ್ರಣ ತಪ್ಪಿ ಕಾರ್ಮಿಕ ಹಾಗೂ ಬೈಕ್ ಸವಾರನಿಗೆ ಡಿಕ್ಕಿಯಾದ ಪರಿಣಾಮ, ಏತ ನಿರಾವರಿ ಕೆಲಸ ಮಾಡುತ್ತಿದ್ದಂತ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಇನ್ನೂ ಬೈಕ್ ಸವಾರ ಹಾಗೂ ಬೊಲೆರೋ ಚಾಲಕ ಗಂಭೀರವಾಗಿ ಗಾಯಗೊಂಡಿರೋ ಘಟನೆ ಮುದ್ದಿನಕೊಪ್ಪ ಬಳಿ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಮುದ್ದಿನಕೊಪ್ಪ ಕ್ರಾಸ್ ಬಳಿಯಲ್ಲಿ, ಇಂದು ಭೀಕರ ಅಪಘಾತ ನಡೆದಿದೆ. ಬೊಲೆರೋವೊಂದು ಚಾಲಕನ ನಿಯಂತ್ರಣ ತಪ್ಪಿ, ಹೊಲದಲ್ಲಿ ಬೈಕ್ ಗೆ ಡಿಕ್ಕಿಯಾಗಿದೆ. ಇದರಿಂದ ಬೈಕ್ ಸವಾರ ತೀವ್ರವಾಗಿ ಗಾಯಗೊಂಡಿದ್ದಾನೆ.

ಇನ್ನೂ ಇದೇ ಬೊಲೆರೋ ವಾಹನ ರಸ್ತೆಯ ಪಕ್ಕದಲ್ಲಿನ ಹೊಲಕ್ಕೆ ನುಗ್ಗಿದ್ದರಿಂದಾಗಿ, ಹೊಲದಲ್ಲಿ ಏತ ನೀರಾವರಿ ಕೆಲಸ ಮಾಡುತ್ತಿದ್ದಂತ ಕಾರ್ಮಿಕ ಚಂದ್ರಶೇಖರ್ ಎಂಬಾತ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾಗಿ ತಿಳಿದು ಬಂದಿದೆ.

ಬೊಲೆರೋ ವಾಹನ ಚಾಲಕ ಹಾಗೂ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಘಟನೆಗೆ ಬೊಲೆರೋ ವಾಹನ ಸವಾರ ಅತಿ ವೇಗದ ಚಾಲನೆಯೇ ಕಾರಣ ಎನ್ನಲಾಗುತ್ತಿದೆ. ಈ ಸಂಬಂಧ ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹಿರಾತು

LEAVE A REPLY

Please enter your comment!
Please enter your name here