ಚಾಲಕನ ನಿಯಂತ್ರಣ ತಪ್ಪಿ ಮರಳು ತುಂಬಿದ ಟಿಪ್ಪರ್ ಲಾರಿ ಅಪಘಾತ !

0
1183

ರಿಪ್ಪನ್‌ಪೇಟೆ: ಚಾಲಕನ ನಿಯಂತ್ರಣ ತಪ್ಪಿ ಮರಳು ತುಂಬಿದ ಟಿಪ್ಪರ್ ಲಾರಿಯೊಂದು ಅಪಘಾತಕ್ಕೀಡಾದ ಘಟನೆ ರಿಪ್ಪನ್‌ಪೇಟೆ – ಹೊಸನಗರ ರಸ್ತೆಯ ಶೆಟ್ಟಿಬೀಡು ಗ್ರಾಮದಲ್ಲಿ ನಡೆದಿದೆ.

ಹೊಸನಗರ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ತೆರಳುತ್ತಿದ್ದ KA 55 3809 ನಂಬರಿನ ಟಿಪ್ಪರ್ ಲಾರಿಯು ಶೆಟ್ಟಿಬೀಡು ಸಮೀಪದಲ್ಲಿ ಬ್ರೇಕ್ ಜಾಮ್ ಆಗಿ ಎದುರಿಗೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದೆ. ಪರಿಣಾಮ ಲಾರಿ ಮುಂಭಾಗ ನಜ್ಜುಗುಜ್ಜಾಗಿದೆ. ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಈ ಘಟನೆ ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಜಾಹಿರಾತು

LEAVE A REPLY

Please enter your comment!
Please enter your name here