ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಮಾರುತಿ ಓಮ್ನಿ ಕಾರು!

0
8318

– ಧರ್ಮಸ್ಥಳದಿಂದ ಶಿವಮೊಗ್ಗಕ್ಕೆ ಪ್ರಯಾಣಿಸುತ್ತಿದ್ದ ಕಾರು!

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಓಮ್ನಿ ಕಾರೊಂದು ರಸ್ತೆ ಬದಿಯ ಹೊಂಡಕ್ಕೆ ಬಿದ್ದ ಘಟನೆ ನಡೆದಿದೆ.

ಕೊಟ್ಟಿಗೆಹಾರ ಮತ್ತು ಬಣಕಲ್ ಮಧ್ಯೆ ರಾಷ್ಟ್ರೀಯ ಹೆದ್ದಾರಿಯ ಹೆಬ್ಬರಿಗೆಯಲ್ಲಿ ಈ ಅಪಘಾತ ನಡೆದಿದ್ದು, ಇಬ್ಬರು ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಾಗಳಾಗಿದೆ. ಇವರು ಧರ್ಮಸ್ಥಳದಿಂದ ಶಿವಮೊಗ್ಗಕ್ಕೆ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.

ವಾಹನದಲಿದ್ದ ಪ್ರಯಾಣಿಕರು ಶಿವಮೊಗ್ಗ ಮೂಲದವರಾಗಿದ್ದರು ಸಮಾಜ ಸೇವಕ ಆರಿಫ್ ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ.

ಮೂಡಿಗೆರೆ ತಾಲ್ಲೂಕಿನ ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಜಾಹಿರಾತು

LEAVE A REPLY

Please enter your comment!
Please enter your name here