ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಎಂ.ಎಚ್.ಅಕ್ಷಯ್ ಅವರನ್ನು ವರ್ಗಾವಣೆ ಮಾಡಿ ಸರಕಾರ ಶನಿವಾರ ಆದೇಶಿಸಿದ್ದು, ಜಿಲ್ಲೆಯ ನೂತನ ಎಸ್ಪಿಯನ್ನಾಗಿ ಐಪಿಎಸ್ ಅಧಿಕಾರಿ ಉಮಾ ಪ್ರಶಾಂತ್ ಅವರನ್ನು ನೇಮಿಸಿ ಆದೇಶ ಹೊರಡಿಸಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಎಸ್ಪಿಯಾಗಿದ್ದ ಎಂ.ಎಚ್.ಅಕ್ಷಯ್ ಅವರು ಕಳೆದ ಎರಡು ವರ್ಷಗಳಿಂದ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ದಿಢೀರ್ ಬೆಳವಣಿಗೆಯಲ್ಲಿ ರಾಜ್ಯ ಸರಕಾರ ಅವರನ್ನು ವರ್ಗಾವಣೆ ಮಾಡಿದೆ.
ಎಸ್ಪಿ ಅಕ್ಷಯ್ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ಬೆಂಗಳೂರಿನಲ್ಲಿ ಎಸಿಬಿ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಉಮಾ ಪ್ರಶಾಂತ್ ಅವರನ್ನು ನೇಮಿಸಿ ಸರಕಾರ ಆದೇಶಿಸಿದೆ.