ಚಿಕ್ಕಮಗಳೂರು ಜಿಲ್ಲೆಗೆ ಉಸ್ತುವಾರಿ ಸಚಿವರಿಲ್ಲದೆ ಇಲ್ಲದೆ ಅನಾಥ !

0
241

ಚಿಕ್ಕಮಗಳೂರು: ಬಿಜೆಪಿ ಸರ್ಕಾರದಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ಉಸ್ತುವಾರಿ ಸಚಿವರಿಲ್ಲದೆ ಇಲ್ಲದೆ ಅನಾಥವಾಗಿದೆ. ಎರಡು, ಮೂರು ತಿಂಗಳಿಗೆ ಒಬ್ಬರಂತೆ ಬಂದು ಮಾಯವಾಗುತ್ತಿದ್ದು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದ ಕಾರ್ಯಾಧ್ಯಕ್ಷ ಜಿ ಕಾರ್ತಿಕ್ ಚೆಟ್ಟಿಯಾರ್ ಆರೋಪಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯನ್ನು ಮತ್ತು ಜಿಲ್ಲೆಯ ಜನರನ್ನು ಬಿಜೆಪಿ ಸರ್ಕಾರ ಸಂಪೂರ್ಣ ಮರೆತಿದೆ. ಈ ಜಿಲ್ಲೆಯಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಯೋಜನೆಗಳು ನಡೆಯದೆ ಶೂನ್ಯ ಸಾಧನೆಯತ್ತ ಸಾಗುತ್ತಿದೆ.‌ ಈಗಾಗಲೇ ಎರಡು, ಮೂರು ಸಚಿವರು ಚಿಕ್ಕಮಗಳೂರು ಜಿಲ್ಲೆಯ ಉಸ್ತುವಾರಿಯಾಗಿ ಬಂದು ಹೋದರು ಪ್ರಯೋಜನವಾಗಿಲ್ಲ.

ದಿನಸಿ ವಸ್ತುಗಳು, ಆಹಾರ ಪದಾರ್ಥ, ಔಷಧಿಗಳು, ಇಂಧನ, ಪ್ರಯಾಣದರ, ವಿದ್ಯುತ್ ದರ ಸೇರಿದಂತೆ ಎಲ್ಲಾ ವಸ್ತುಗಳ ಬೆಲೆಗಳು ದಿನೇದಿನೇ ಗಗನಕ್ಕೇರುತ್ತಿದೆ. ಇದನ್ನು ತಹಬದಿಗೆ ತರುವ ಬದಲು ಸರಕಾರದ ಮಂತ್ರಿಯಾದವರು ಒಂದಿಲ್ಲೊಂದು ರೀತಿಯಲ್ಲಿ ಆಪಾದನೆಗಳನ್ನು ಹೊತ್ತುಕೊಂಡು ಹೊರನಡೆಯುತ್ತಿರುವುದು ಬಿಜೆಪಿ ಸರಕಾರದ ಹಿನ್ನಡೆಯಾಗಿದೆ ಎಂದು ಅವರು ದೂರಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡು ಪ್ರಾಣಿಗಳ ಹಾವಳಿ ದಿನೇದಿನೆ ಹೆಚ್ಚುತ್ತಿದೆ, ಇದಕ್ಕೆ ಪರಿಹಾರ ಸರ್ಕಾರ ರೂಪಿಸಿಲ್ಲ. ಕಾಡಾನೆಗಳ ಹಾವಳಿಯಿಂದ ಜನ ಕಂಗಾಲಾಗಿದ್ದಾರೆ. ಹುಲಿ ಚಿರತೆ ಕಾಡು ಪ್ರಾಣಿಗಳಿಗೆ ಹೆದರಿ ಜನರು ದಿನ ದುಡುತ್ತಿದ್ದಾರೆ. ಅಲ್ಲದೆ, ಜಿಲ್ಲೆಯ ಬಹುತೇಕ ರಸ್ತೆಗಳು ಹದಗೆಟ್ಟು ಹೋಗಿವೆ. ಹಲವೆಡೆ ಕುಡಿಯುವ ನೀರಿಗಾಗಿ ಜನರು ಆಕಾರ ಎಬ್ಬಿಸುತ್ತಿದ್ದಾರೆ. ಇಂತಹ ಸಮಯದಲ್ಲಿ ಜಿಲ್ಲೆಯಲ್ಲಿ ಉಸ್ತುವಾರಿ ಸಚಿವರು ಇಲ್ಲದೆ ಚಿಕ್ಕಮಗಳೂರು ಜಿಲ್ಲೆಯು ಅನಾಥವಾಗಿದೆ ಎಂದು ಬೇಸರ ವ್ಯಕ್ತಪಡಿಸಿ, ಮುಂದಿನ ಚುನಾವಣೆಯಲ್ಲಿ ಮತದಾರರು ಪಾಠ ಕಲಿಸುವ ಸಮಯ ಹತ್ತಿರವಿದೆ ಎಂದು ತಿಳಿಸಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here