ಚಿಕ್ಕಮಗಳೂರು ಜಿಲ್ಲೆಯಲ್ಲಿ ಇದೆ 17 ರಂದು ಬೃಹತ್ ಪ್ರಮಾಣದ ಕೊರೊನಾ ಮೆಗಾ ಲಸಿಕಾ ಅಭಿಯಾನ

0
471

ಚಿಕ್ಕಮಗಳೂರು: ಸರ್ಕಾರದ ಆದೇಶದಂತೆ ಇದೆ ತಿಂಗಳ 17ರ ಶುಕ್ರವಾರ ರಂದು ಜಿಲ್ಲೆಯ ಎಲ್ಲಾ ಭಾಗದಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯ ವರೆಗೆ ಬೃಹತ್ ಪ್ರಮಾಣದ ಕೊರೊನಾ ಮೆಗಾ ಲಸಿಕಾಕರಣ ಅಭಿಯಾನವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎನ್ ರಮೇಶ್ ತಿಳಿಸಿದ್ದಾರೆ.

ನಗರ ಹಾಗೂ ಗ್ರಾಮೀಣ ಭಾಗದ ಪ್ರತೀ ಮನೆ- ಮನೆಗೆ ಆರೋಗ್ಯ ಕಾರ್ಯಕರ್ತರು ಭೇಟಿ ನೀಡಿ ಇಲ್ಲಿಯವರೆಗೂ ಲಸಿಕೆ ಪಡೆಯದಿರುವ 18 ವರ್ಷ ಮೇಲ್ಪಟ್ಟ ಎಲ್ಲರನ್ನು ಗುರುತಿಸಿ ಲಸಿಕಾ ಕೇಂದ್ರಗಳಿಗೆ ಹಾಜರಾಗಿ ಲಸಿಕೆ ಪಡೆಯಬೇಕು.

ಜಿಲ್ಲೆಯಲ್ಲಿ 17 ಅಂದು ಸುಮಾರು 75 ಸಾವಿರ ಸಾರ್ವಜನಿಕರಿಗೆ ಲಸಿಕೆ ನೀಡಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಿದ್ದತೆ ಮಾಡಿಕೊಂಡಿದ್ದು, ಲಸಿಕೆಯನ್ನು ಆರೋಗ್ಯ ಕ್ಷೇಮ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ನಗರ ಆರೋಗ್ಯ ಕೇಂದ್ರ ತಾಲ್ಲೂಕು ಆಸ್ಪತ್ರೆಗಳಲ್ಲಿ ನೀಡಲಾಗುತ್ತದೆ. ಎಲ್ಲಾ ಇಲಾಖೆಗಳ ಮುಖ್ಯಸ್ಥರು ತಮ್ಮ ಕಛೇರಿ ಹಾಗೂ ತಾಲ್ಲೂಕು ಕ್ಷೇತ್ರ ಮಟ್ಟದ ಅಧಿಕಾರಿ, ಸಿಬ್ಬಂದಿಗಳು ಲಸಿಕೆ ಪಡೆಯದಿರುವ ಬಗ್ಗೆ ಕುರಿತು ಖಚಿತ ಇಲ್ಲವಾದರೆ ಪಡಿಸಿಕೊಳ್ಳಬೇಕು, ಅವರನ್ನು 17 ರಂದು ಕಡ್ಡಾಯವಾಗಿ ಲಸಿಕೆ ಪಡೆದುಕೊಳ್ಳುವಂತೆ ತಿಳಿಸಬೇಕು.

18 ವರ್ಷ ಮೇಲ್ಪಟ್ಟ ಜಿಲ್ಲೆಯ ಎಲ್ಲ ಅರ್ಹ ನಾಗರೀಕರು, ಸರ್ಕಾರಿ ಮತ್ತು ಖಾಸಗಿ ವಲಯದ ಎಲ್ಲಾ ನೌಕರರು ತಪ್ಪದೇ ಲಸಿಕೆ ಪಡೆದುಕೊಳ್ಳುವಂತೆ ಅವರು ತಿಳಿಸಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here