ಚಿಕ್ಕಮಗಳೂರು ಜಿಲ್ಲೆಯ ಪ್ರವಾಸಯೋದ್ಯಮಕ್ಕೆ ಒಳಪಡು ಕಾಮಗಾರಿಗಳನ್ನು ವೇಗವಾಗಿ ಮುಗಿಸಿ : ಸಿ.ಟಿ ರವಿ

0
136

ಚಿಕ್ಕಮಗಳೂರು: ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಮಂಜೂರಾಗಿರುವ ಕಾಮಗಾರಿಗಳನ್ನು ವೇಗವಾಗಿ ಮಾಡಿ ಮುಗಿಸಲು ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ಅಧಿಕಾರಿಗಳಿಗೆ ಸೂಚಿಸಿದ್ದರು.

ಜಿಲ್ಲಾಧಿಕಾರಿ ಕಛೇರಿಯಲ್ಲಿ ನಡೆದ ಪ್ರವಾಸೊದ್ಯಮ ಇಲಾಖೆಯ ಕಾಮಗಾರಿಗಳ ಸ್ಥಿತಿಗತಿಗಳನ್ನು ಪರಿಶೀಲನೆ ನಡೆಸಿ ಮಾತನಾಡಿದ ಅವರು, ಜಿಲ್ಲಾದ್ಯಂತ ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ಅನೇಕ ಯೋಜನೆಗಳು ಮಂಜೂರಾತಿಗೊಂಡರೂ ಇನ್ನೂ ಕಾಮಗಾರಿ ಆರಂಭಗೊಂಡಿರುವುದಿಲ್ಲ. ಸರ್ಕಾರದ ಹಂತದಲ್ಲಿ ಸಾಕಷ್ಟು ಒತ್ತಡ ಹೇರಿ ಯೋಜನೆಗಳು ಮಂಜೂರಾತಿಗೊಂಡು ಅನುದಾನ ಬಿಡುಗಡೆಯಾಗಿದೆ. ಆದರೆ ಅಂದಾಜು ಪಟ್ಟಿ, ಟೆಂಡರ್ ಪ್ರಕ್ರಿಯೆ ಮತ್ತಿತರ ಪ್ರಕ್ರಿಯೆಗಳು ದೀರ್ಘ ಸಮಯ ತೆಗೆದುಕೊಳ್ಳುತ್ತದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಕೆ.ಆರ್.ಐ.ಡಿ.ಎಲ್ ನಿರ್ಮಿತಿ ಕೇಂದ್ರ ಮತ್ತಿತರ ಏಜೆನ್ಸಿಗಳಿಗೆ ಯೋಜನೆಗಳ ಕಾಮಗಾರಿಗೆ ಹಣ ಬಿಡುಗಡೆಯಾಗಿದ್ದರೂ ಇನ್ನೂ ಕಡತದ ಹಂತದಲ್ಲಿಯೇ ಹಲವು ಕಾಮಗಾರಿಗಳು ಇವೆ. ಕೆಲವು ಕಾಮಗಾರಿಗಳು ಬಹಳ ನಿಧಾನವಾಗಿ ನಡೆಯುತ್ತವೆ ಎಂದು ಅವರು ಅತೃಪ್ತಿ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿಗಳು ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆಗಳ ಕಾಮಗಾರಿಗಳನ್ನು ನಿರಂತರವಾಗಿ ಗಮನಿಸಿ ಚುರುಕುಗೊಳಿಸಬೇಕು ಎಂದು ಶಾಸಕರು ತಿಳಿಸಿದರು. ಚಿಕ್ಕಮಗಳೂರು ನಗರದ ಕೆಲವೆಡೆ ಫೂಟ್‌ಪಾತ್‌ಗಳನ್ನು ಅವೈಜ್ಞಾನಿಕವಾಗಿ ನಿರ್ಮಿಸಿದ್ದು, ಪಾದಾಚಾರಿ ಸ್ನೇಹಿಯಾಗಿ ಫೂಟ್‌ಪಾತ್‌ಗಳನ್ನು ನಿರ್ಮಾಣ ಮಾಡುವಂತೆ ಅವರು ತಿಳಿಸಿದರು.

ಕೆಲವು ಪ್ರಾಚೀನ ದೇವಸ್ಥಾನಗಳ ಅಭಿವೃದ್ಧಿ ಕಾಮಗಾರಿಗಳನ್ನು ಪುರಾತತ್ವ ಇಲಾಖೆ ನಿರ್ವಹಿಸುತ್ತಿದ್ದು, ಅನುದಾನ ಬಿಡುಗಡೆಯಾಗಿದೆ. ಈ ಕಾಮಗಾರಿಗಳನ್ನು ಚುರುಕುಗೊಳಿಸಲು ಶಾಸಕರು ತಿಳಿಸಿದರು.

ದಬೆದಬೆ ಫಾಲ್ಸ್‌ಗೆ ಹೋಗುವ ರಸ್ತೆ ನಿರ್ಮಾಣಕ್ಕೆ ಖಾಸಗಿ ಭೂಮಿ ಅಗತ್ಯವಿದ್ದರೆ ಭೂಸ್ವಾಧೀನ ಪ್ರಕ್ರಿಯೆ ನಡೆಸುವಂತೆ ಸೂಚಿಸಿದ ಅವರು ಇಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಅಂದಾಜು ಪಟ್ಟಿ ತಯಾರಿಸುವಂತೆ ಲೋಕೋಪಯೋಗಿ ಇಲಾಖೆಗೆ ಸೂಚಿಸಿದರು.

ಪ್ರವಾಸೋದ್ಯಮ ಇಲಾಖೆಯಿಂದ ಅನುಷ್ಠಾನಗೊಳ್ಳುತ್ತಿರುವ ವಿವಿಧ ಕಾಮಗಾರಿಗಳ ಪ್ರಗತಿಯನ್ನು ಶಾಸಕರು ಪರಿಶೀಲಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಎನ್.ರಮೇಶ್, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಶಿವಕುಮಾರ್ ಮತ್ತು ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು

ಜಾಹಿರಾತು

LEAVE A REPLY

Please enter your comment!
Please enter your name here