ಚಿಕ್ಕಮಗಳೂರು ನಗರದಲ್ಲಿ ಉಪಪ್ರಾದೇಶಿಕ ವಿಜ್ಞಾನ ಕೇಂದ್ರ ಸ್ಥಾಪನೆ: ಸಿ.ಟಿ. ರವಿ

0
170

ಚಿಕ್ಕಮಗಳೂರು: ನಗರದಲ್ಲಿ ಉಪಪ್ರಾದೇಶಿಕ ವಿಜ್ಞಾನ ಕೇಂದ್ರವನ್ನು ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ ಎಂದು ಶಾಸಕ ಸಿ.ಟಿ. ರವಿ ಹೇಳಿದ್ದಾರೆ.

ಈ ಕೇಂದ್ರವನ್ನು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್) ಮೂಲಕ ಸ್ಥಾಪಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ ಈಗಾಗಲೇ 9.36 ಎಕರೆ ಜಾಗವನ್ನು ಕಾಯ್ದಿರಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಶೀಘ್ರದಲ್ಲೇ ಕೆಸ್ಟೆಪ್ಸ್‍ನ ಅಧಿಕಾರಿಗಳು ವಿಜ್ಞಾನ ಕೇಂದ್ರದ ಸ್ಥಳಪರಿಶೀಲನೆಗೆ ಆಗಮಿಸಲಿದ್ದಾರೆ. ಪ್ರಸ್ತುತ 4 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಈ ಕೇಂದ್ರವನ್ನು ಸ್ಥಾಪಿಸಲು ಮಂಜೂರಾತಿ ದೊರೆತಿದ್ದು, ಅತ್ಯಾಧುನಿಕ ಶೈಲಿಯಲ್ಲಿ ಈ ವಿಜ್ಞಾನ ಕೇಂದ್ರ ಸ್ಥಾಪಿಸಲು ಹೆಚ್ಚುವರಿ ಅನುದಾನವನ್ನು ಒದಗಿಸುವಂತೆ ಕೋರಲಾಗಿದೆ ಎಂದಿದ್ದಾರೆ.

ಈ ವಿಜ್ಞಾನ ಕೇಂದ್ರವನ್ನು ಸ್ಥಾಪಿಸುವುದರಿಂದ ವಿದ್ಯಾರ್ಥಿಗಳಿಗೆ ಹಾಗೂ ಜನರಿಗೆ ವಿಜ್ಞಾನ ಹಾಗೂ ತಂತ್ರಜ್ಞಾನದ ಬಗ್ಗೆ ಹೆಚ್ಚಿನ ಅರಿವು ಮೂಡಿಸಲು ಅನುಕೂಲವಾಗಲಿದೆ ಎಂದು ಶಾಸಕರು ತಿಳಿಸಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here