ಚಿಕ್ಕಮಗಳೂರು: ಕಾಫಿನಾಡಿನಲ್ಲಿ 73ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಸಂಭ್ರಮದಿಂದ ಆಚರಣೆ ಮಾಡಲಾಯಿತು.
ನಗರದ ಸುಭಾಷ್ ಚಂದ್ರಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಆಯೋಜನೆಗೊಂಡ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ. ಎಸ್ ಈಶ್ವರಪ್ಪ ಧ್ವಜಾರೋಹಣ ನೇರವೇರಿಸಿದರು

ಇದಕ್ಕೂ ಮೊದಲು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ಕೆ. ಎಸ್ ಈಶ್ವರಪ್ಪ, ಧ್ವಜಾರೋಹಣದ ಬಳಿಕ ಪಥಸಂಚಲನದಲ್ಲಿ ಭಾಗಿಯಾಗಿದ್ದ ವಿವಿಧ ತಂಡಗಳಿಂದ ಗೌರವ ವಂದನೆ ಪಡೆದರು.

ಕಾರ್ಯಕ್ರಮದಲ್ಲಿ ಶಾಸಕ ಸಿ. ಟಿ ರವಿ, ವಿಧಾನ ಪರಿಷತ್ ಉಪಸಭಾಪತಿ ಎಂ. ಕೆ ಪ್ರಾಣೇಶ್ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು
Related
You cannot copy content of this page