ಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ಕಟ್ಟುನಿಟ್ಟಿನ ನಿಗಾ ವಹಿಸಿ: ಮನೋಜ್ ಜೈನ್

0
138

ಚಿಕ್ಕಮಗಳೂರು: ರಾಜ್ಯಾದ್ಯಂತ ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಮಾದರಿ ನೀತಿ ಸಂಹಿತೆ ಜಿಲ್ಲೆಯಲ್ಲಿ ಉಲ್ಲಂಘನೆಯಾಗದಂತೆ ನಿಗಾ ವಹಿಸಲು ಚುನಾವಣಾ ಆಯೋಗದ ವೀಕ್ಷಕ ಮನೋಜ್ ಜೈನ್ ಅವರು ಸೂಚಿಸಿದ್ದಾರೆ.

ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿಧಾನ ಪರಿಷತ್ ಚುನಾವಣಾ ಸಂಬಂಧಿಸಿದಂತೆ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿ. ನಿಷ್ಪಕ್ಷಪಾತ ಚುನಾವಣೆ ನಡೆಯಲು ಗಮನಹರಿಸಬೇಕು. ಚುನಾವಣಾ ಆಯೋಗದ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಹೇಳಿದರು.

ಕೆಳ ಹಂತದ ಸಿಬ್ಬಂಧಿಗಳ ಚುನಾವಣಾ ಕರ್ತವ್ಯದ ಮೇಲೆ ಅಧಿಕಾರಿಗಳು ಗಮನಹರಿಸಬೇಕು. ಸ್ಥಳೀಯವಾಗಿ ಎದುರಾಗುವ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸಬೇಕು. ಅಧಿಕಾರಿಗಳು ತಮ್ಮ ಚುನಾವಣಾ ಅಧಿಕಾರವನ್ನು ಪರಿಣಾಮಕಾರಿಯಾಗಿ ನಿಭಾಯಿಸಬೇಕು. ಇದರಿಂದ ಚುನಾವಣಾ ಪ್ರಕ್ರಿಯೆಯು ಸುಗಮವಾಗಿ ನಡೆಯಲು ಅನುಕೂಲವಾಗಲಿದೆ ಎಂದು ಮನೋಜ್ ಜೈನ್ ತಿಳಿಸಿದರು.

ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಮಾತನಾಡಿ, ವಿಧಾನ ಪರಿಷತ್ ಚುನಾವಣೆಗೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮತಗಟ್ಟೆ, ಸಿಬ್ಬಂಧಿ ನಿಯೋಜನೆ, ವಾಹನ ಮತ್ತಿತರ ವ್ಯವಸ್ಥೆಯನ್ನು ಈಗಾಗಲೇ ಸಿದ್ಧತೆ ಮಾಡಲಾಗಿದೆ. ಸಿಬ್ಬಂಧಿಗಳಿಗೆ ತರಭೇತಿ ನೀಡಲಾಗುತ್ತದೆ ಎಂದರು.

ಅಭ್ಯರ್ಥಿಗಳ ಚುನಾವಣಾ ಪ್ರಚಾರ ಕಾರ್ಯವನ್ನು ವೀಡಿಯೋ ಮಾಡಲಾಗುತ್ತದೆ. ಅಕ್ರಮ ಮದ್ಯ ಮಾರಾಟ ತಡೆಗೆ ತಂಡ ರಚಿಸಲಾಗಿದೆ ಎಂದು ಹೇಳಿದರು.

ಸಭೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ.ಎಚ್., ಅಪರ ಜಿಲ್ಲಾಧಿಕಾರಿ ಬಿ.ಆರ್. ರೂಪಾ, ವಿವಿಧ ಇಲಾಖಾಧಿಕಾರಿಗಳು ಹಾಜರಿದ್ದರು.

ಜಾಹಿರಾತು

LEAVE A REPLY

Please enter your comment!
Please enter your name here