ಚೈಲ್ಡ್‌ಲೈನ್ ಸೇ ದೋಸ್ತಿ ಮಕ್ಕಳ ರಕ್ಷಣಾ ಸಪ್ತಾಹ ಒಂದು ವಾರಗಳ ಕಾರ್ಯಕ್ರಮಗಳ ಉದ್ಘಾಟನೆ

0
49

ಚಿಕ್ಕಮಗಳೂರು: ನಗರದ ಟೌನ್ ಮಹಿಳಾ ಸಮಾಜ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಂಗಳವಾರ ಚೈಲ್ಡ್ ಲೈನ್ ಸೇ ದೋಸ್ತಿ ಮಕ್ಕಳ ರಕ್ಷಣಾ ಸಪ್ತಾಹ ಒಂದು ವಾರದ ಉದ್ಘಾಟನಾ ಕಾರ್ಯಕ್ರಮ ಆರಂಭಗೊಂಡಿದ್ದು, ಇಂದು ನಗರದ ಸಂಜೀವಿನಿ ವಿದ್ಯಾಸಂಸ್ಥೆಯಲ್ಲಿ 2ನೇ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿದ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶೃತಿ ಇವರು ಮೊಬೈಲ್ ಮತ್ತು ಅಂತರ್ಜಾಲವನ್ನು ಬಳಸುವಾಗ ಸುರಕ್ಷತಾ ಕ್ರಮಗಳನ್ನು ಅನುಸರಿಸಿ, ಮೊಬೈಲ್ ಬ್ಯಾಂಕಿಂಗ್, ಎಟಿಎಮ್ ಗಳನ್ನು ಉಪಯೋಗಿಸುವಾಗ ಸುರಕ್ಷತಾ ಕ್ರಮಗಳ ಬಗ್ಗೆ ಮಾಹಿತಿ ತಿಳಿಸಿದರು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ರಂಗನಾಥ್ ಸಿ, ಇವರು ಮಕ್ಕಳ ರಕ್ಷಣಾ ಕಾಯ್ದೆಗಳಾದ ಪೊಕ್ಸೋ ಕಾಯ್ದೆ, ಬಾಲ್ಯವಿವಾಹ ಕಾಯ್ದೆಗಳ ಬಗ್ಗೆ ಹಾಗೂ ಇಲಾಖೆಯಲ್ಲಿ ಮಕ್ಕಳಿಗಿರುವ ಯೋಜನೆಗಳ ಬಗ್ಗೆ ವಿವರವಾದ ಮಾಹಿತಿಯನ್ನು ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಛೇರಿಯ ಕಾನೂನು ಅಧಿಕಾರಿ (ಕಿರಿಯ) ರಾಘವೇಂದ್ರ ರಾಯ್ಕರ್ ಇವರು ಮಕ್ಕಳಿಗೆ ಸಂಚಾರಿ ನಿಯಮಗಳು, ಬೈಕ್ ಚಲಾಯಿಸುವಾಗ ಹೆಲ್ಮೆಟ್ ಧರಿಸಬೇಕು ಹಾಗೂ ಮಕ್ಕಳು ಮೊಬೈಲ್‌ನ್ನು ಒಳ್ಳೆಯ ಉದ್ದೇಶಗಳಿಗೆ ಬಳಸಿಕೊಳ್ಳಿ ಎಂದು ಮಾಹಿತಿ ನೀಡಿದರು.

ಚೈಲ್ಡ್ ಲೈನ್ ಸೇ ದೋಸ್ತಿ ಅಭಿಯಾನದ ಅಂಗವಾಗಿ ವಿವಿಧ ಶಾಲೆಯ ಮಕ್ಕಳಿಗೆ ಆನ್‌ಲೈನ್ ತರಗತಿಯಿಂದ ಆದಂತಹ ಅನುಕೂಲಗಳು ಮತ್ತು ಅನಾನುಕೂಲಗಳ ಕುರಿತು ಭಾಷಣ ಸ್ಪರ್ಧೆ ಮತ್ತು ಕೋವಿಡ್-19ರ ನಂತರದಲ್ಲಿ ಶಾಲೆಗೆ ಬಂದಾಗ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಪ್ರಬಂಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನವನ್ನು ವಿತರಿಸಲಾಯಿತು.

ಜಾಹಿರಾತು

LEAVE A REPLY

Please enter your comment!
Please enter your name here