ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ – ಕಂದಾಯ ಇಲಾಖೆ

0
353

ಶಿವಮೊಗ್ಗ: ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ- ಕಂದಾಯ ಇಲಾಖೆ ಎಂಬ ಹೊಸ ಪರಿಕಲ್ಪನೆಯಡಿ ಪ್ರತಿ ತಿಂಗಳ 3ನೇ ಶನಿವಾರದಂದು ಜಿಲ್ಲಾಧಿಕಾರಿಗಳು ಗ್ರಾಮ ಭೇಟಿ ನೀಡಿ ವಾಸ್ತವ್ಯ ಮಾಡಲಿದ್ದಾರೆ.

ಈ ಪರಿಕಲ್ಪನೆಯ ಅಂಗವಾಗಿ ದಿ:21/05/2022ರ ಶನಿವಾರ ಬೆಳಗ್ಗೆ 11.00ಕ್ಕೆ ಹೊಸನಗರ ತಾಲೂಕು ಕೆರೆಹಳ್ಳಿ ಹೋಬಳಿ ಬೆಳ್ಳೂರು ಗ್ರಾಮ ಪಂಚಾಯತಿಯಲ್ಲಿ ಜಿಲ್ಲಾಧಿಕಾರಿಗಳು ಕಂದಾಯ ಮತ್ತು ಇತರೆ ಎಲ್ಲಾ ಇಲಾಖೆಯ ಎಲ್ಲಾ ಅಧಿಕಾರಿ/ಸಿಬ್ಬಂದಿಗಳೊಂದಿಗೆ ಸಾರ್ವಜನಿಕರನ್ನು ಭೇಟಿ ಮಾಡಿ ಕುಂದು ಕೊರತೆಗಳನ್ನು ಆಲಿಸಿ ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡು, ಹಳ್ಳಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಆದ್ದರಿಂದ ಈ ಗ್ರಾಮದ ಸಾರ್ವಜನಿಕರು ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ತಮ್ಮ ಅಹವಾಲುಗಳನ್ನು ಮುಂಚಿತವಾಗಿ ತಮ್ಮ ಗ್ರಾಮದಲ್ಲಿಯ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸಲ್ಲಿಸಿ, ದಿ:21/05/2022 ರಂದು ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಅಪರ ಜಿಲ್ಲಾಧಿಕಾರಿ ಡಾ. ನಾಗೇಂದ್ರ ಎಫ್. ಹೊನ್ನಳ್ಳಿರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here