ಜೀವಜಲ ಯೋಜನೆಯಡಿ ಅರ್ಜಿ ಆಹ್ವಾನ

0
1305

ಶಿವಮೊಗ್ಗ: ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮವು 2021-22 ನೇ ಸಾಲಿಗೆ ಜೀವಜಲ (ಬೋರ್‍ವೆಲ್ & ಓಪನ್ ವೆಲ್) ಯೋಜನೆಯಡಿ ಸೌಲಭ್ಯ ಪಡೆಯಲು ಇಚ್ಚಿಸುವ ವೀರಶೈವ ಲಿಂಗಾಯತ ಸಮುದಾಯದ ಪ್ರವರ್ಗ 3ಬಿ ಗೆ ಒಳಪಡುವ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಕುಟುಂಬದ ವಾರ್ಷಿಕ ವರಮಾನ ರೂ.40,000/-ಗಳ ಮಿತಿಯಲ್ಲಿರುವ ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿಲ್ಲದೆ ಇರುವ ಸಣ್ಣ ಹಾಗೂ ಅತಿ ಸಣ್ಣ ರೈತರು ಅರ್ಜಿ ಸಲ್ಲಿಸಬಹುದು. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಕನಿಷ್ಟ 1 ಎಕರೆ ಜಮೀನು ಹೊಂದಿರಬೇಕು.

24 ಜಿಲ್ಲೆಗಳಿಗೆ ವೈಯಕ್ತಿಕ ನೀರಾವರಿ ಕೊಳವೆ ಬಾವಿಗಳಿಗೆ ಘಟಕ ವೆಚ್ಚ ರೂ.2.50 ಲಕ್ಷ ನಿಗದಿಪಡಿಸಿದ್ದು, ಇದರಲ್ಲಿ 2.00 ಲಕ್ಷ ಸಹಾಯಧನ ಹಾಗೂ ರೂ.50 ಸಾವಿರಗಳ ಶೇ.4 ರ ಬಡ್ಡಿದರದ ಸಾಲ ಒಳಗೊಂಡಿರುತ್ತದೆ. ನಿಗದಿತ ಘಟಕ ವೆಚ್ಚದಿಂದ ಜೀವಜಲ(ಬೋರ್‍ವೆಲ್ & ಓಪನ್‍ವೆಲ್) ಯೋಜನೆಯಡಿ ಸೌಲಭ್ಯ ಒದಿಗಸಲಾಗುವುದು. ವೈಯಕ್ತಿಕ ನೀರಾವರಿ ಕೊಳವೆ ಬಾವಿ ಘಟಕಕ್ಕೆ ನಿಗದಿಪಡಿಸಿದ ಘಟಕ ವೆಚ್ಚದಲ್ಲಿ ಕರಾವಳಿ ಮತ್ತು ಮಲೆನಾಡು ಪ್ರದೇಶದ ಜಿಲ್ಲೆಗಳಲ್ಲಿ ತೆರೆದ ಬಾವಿ ಮೂಲಕ ನೀರಾವರಿ ಸೌಲಭ್ಯ ಒದಗಿಸಲು ಅವಕಾಶವಿರುತ್ತದೆ.

ಆಸಕ್ತರು ನಿಗಧಿತ ನಮೂನೆ ಅರ್ಜಿಯನ್ನು ಆಯಾ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ನಿಗಮದಿಂದ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಮೇ 10 ರೊಳಗೆ ಸಲ್ಲಿಸುವಂತೆ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮ ನಿಯಮಿತದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಹೆಚ್ಚಿನ ವಿವರಗಳಿಗೆ ವೆಬ್‍ಸೈಟ್ www.dbcdc.karnataka.gov.in ಅಥವಾ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮ ನಿಯಮಿತದ ಕೇಂದ್ರ ಕಚೇರಿಯ ದೂರವಾಣಿ ಸಂಖ್ಯೆ: 080-22865522 ಅಥವಾ ಆಯಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ.ದೇವರಾಜ ಅರಸು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಭಾಗ್ಯ ನಿಲಯ, 1ನೇ ತಿರುವು, ಗಾಂಧಿನಗರ, ಶಿವಮೊಗ್ಗ ಇಲ್ಲಿ ಭೇಟಿ ನೀಡಿ ಅಥವಾ ನಿಗಮದ ದೂರವಾಣಿ ಸಂಖ್ಯೆ : 08182-229634 ನ್ನು ಸಂಪರ್ಕಿಸಬಹುದು.

ಜಾಹಿರಾತು

LEAVE A REPLY

Please enter your comment!
Please enter your name here