ಜೂ.19 ರಂದು ಕಾರ್ಯನಿರತ ಪತ್ರಕರ್ತರ ಸಂಘದ 2022-25ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿ ಪದಗ್ರಹಣ ಸಮಾರಂಭ

0
165

ಶಿವಮೊಗ್ಗ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಶಿವಮೊಗ್ಗ ಜಿಲ್ಲಾ ಘಟಕದ 2022-25 ರ ಸಾಲಿನ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಹಾಗೂ ರಾಜ್ಯ ಪದಾಧಿಕಾರಿಗಳಿಗೆ ಸನ್ಮಾನ ಸಮಾರಂಭ ಜೂ. 19 ರ ಭಾನುವಾರ ಬೆಳಿಗ್ಗೆ 10.30ಕ್ಕೆ ಆರ್‌ಟಿಓ ರಸ್ತೆಯ ಸರ್ಕಾರಿ ನೌಕರರ ಭವನದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಕೆ. ವಿ. ಶಿವಕುಮಾರ್ ಹೇಳಿದರು.

ಶುಕ್ರವಾರ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಮಾರಂಭವನ್ನು ಶಾಸಕ ಕೆ. ಎಸ್. ಈಶ್ವರಪ್ಪ ಉದ್ಘಾಟಿಸಲಿದ್ದು, ನೂತನ ಕಾರ್ಯಕಾರಿ ಮಂಡಳಿಗೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಪ್ರಮಾಣ ವಚನ ಬೋಧಿಸಲಿದ್ದಾರೆ. ಇದೇ ಸಂದರ್ಭದಲ್ಲಿ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭದ ಸವಿನೆನಪಿಗಾಗಿ ಹೊರತರಲಾದ ಸ್ಮರಣ ಸಂಚಿಕೆಯನ್ನು ಸಂಸದ ಬಿ.ವೈ.ರಾಘ ವೇಂದ್ರ ಬಿಡುಗಡೆಗೊಳಿಸಲಿದ್ದಾರೆ ಎಂದರು.

ತಮ್ಮ ಅಧ್ಯಕ್ಷತೆಯಲ್ಲಿನ ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ, ಭಾರತೀಯ ಕಾರ್ಯ ನಿರತ ಪತ್ರಕರ್ತರ ಒಕ್ಕೂಟ, ಏಷ್ಯಾ ವಿಭಾಗದ ಸಂಚಾಲಕರಾದ ಹೆಚ್. ಬಿ. ಮದನಗೌಡ, ಜಾತ್ಯಾತೀತ ಜನತಾದಳದ ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್, ಕೆಪಿಸಿಸಿ ಸಹಕಾರ ವಿಭಾಗದ ಸಂಚಾಲಕ ಆರ್. ಎಂ. ಮಂಜುನಾಥಗೌಡ, ಜಿಲ್ಲಾಧಿಕಾರಿಗಳಾದ ಡಾ. ಸೆಲ್ವಮಣಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಅಧ್ಯಕ್ಷ ಸಿ.ಎಸ್. ಷಡಾಕ್ಷರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಶಫಿ ಸಾದುದ್ಧೀನ್ ಪಾಲ್ಗೊಳ್ಳಲಿದ್ದಾರೆ ಎಂದ ಅವರು, ಕಾರ್ಯಕ್ರಮದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕ ಎನ್. ರವಿಕುಮಾರ್, ವಿಶೇಷ ಆಹ್ವಾನಿತರಾಗಿ ಜಿ. ಪದ್ಮನಾಭ್ ಉಪಸ್ಥಿತರಿರಲಿದ್ದಾರೆ ಎಂದರು.

ಸಮಾರಂಭದಲ್ಲಿ ಕರ್ನಾಟಕಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಭಾರತೀಯ ಕಾರ್ಯನಿರತ ಪತ್ರಕರ್ತ ರಒಕ್ಕೂಟ, ಏಷ್ಯಾ ವಿಭಾಗ ಸಂಚಾಲಕ ಹೆಚ್. ಬಿ. ಮದನಗೌಡ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿ. ಸಿ. ಲೋಕೇಶ್, ಉಪಾಧ್ಯಕ್ಷ ಅಜ್ಜಮಡರಮೇಶ್‌ಕುಟ್ಟಪ್ಪ, ಪುಂಡಲೀಕ ಭೀ. ಭಾಳೋಜಿ, ಭವಾನಿ ಸಿಂಗ್, ಕಾರ್ಯದರ್ಶಿಗಳಾದ ಮತ್ತಿಕೆರೆ ಜಯರಾಮು, ಸೋಮಶೇಖರ ಕೆರಗೋಡು, ಲಿಂಗಪ್ಪಚಾವಡಿ, ಇತ್ತೀಚೆಗೆ ಜಿಲ್ಲೆಯ ಪತ್ರಕರ್ತಕರಿಗಾಗಿ ಆರೋಗ್ಯ ಶಿಬಿರವನ್ನು ಯಶಸ್ವೀಯಾಗಿ ನಡೆಸಿಕೊಟ್ಟ ಮೆಟ್ರೋಯುನೈಟೆಡ್ ಹೆಲ್ತ್‌ಕೇರ್ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಬಿ. ಸಿ. ಪೃಥ್ವಿ, ಹೃದ್ರೋಗತಜ್ಞಡಾ. ಬಿ. ಆರ್. ಮಹೇಶ್ ಮೂರ್ತಿರವರನ್ನು ಆತ್ಮೀಯವಾಗಿ ಸನ್ಮಾನಿಸಲಾಗುತ್ತಿದೆ ಎಂದರು.

ಹಿರಿಯ ಉಪಾಧ್ಯಕ್ಷ ವೈದ್ಯರವರು ಮಾತನಾಡಿ, ಕಳೆದ ಮೂರು ವರ್ಷಗಳಲ್ಲಿ ಸಂಘವು ಹಲವು ಅಡೆತಡೆಗಳ ನಡುವೆಯೂರ ಚನಾತ್ಮಕವಾಗಿ ಕಾರ್ಯಕ್ರಮಗಳನ್ನು ಸಂಘಟಿಸಿದೆ. ಸಂವಾದಗಳು, ಆರೋಗ್ಯ ತಪಾಸಣಾ ಶಿಬಿರಗಳು, ಪತ್ರಿಕಾ ದಿನಾಚರಣೆಗಳು, ಕಾರ್ಯಾಗಾರಗಳನ್ನು ಆಯೋಜಿಸಲಾಗಿದೆ ಎಂದು ವಿವರಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಸಂಘದ ಉಪಾಧ್ಯಕ್ಷರಾದ ವೈದ್ಯ, ಹುಚ್ಚ್ರಾಯಪ್ಪ, ಆರ್.ಎಸ್. ಹಾಲಸ್ವಾಮಿ, ವಿ. ಟಿ. ಅರುಣ್, ಕಾರ್ಯದರ್ಶಿಗಳಾದ ಕೆ. ಆರ್.ಸೋಮನಾಥ್, ಗಾ.ರಾ. ಶ್ರೀನಿವಾಸ್, ಖಜಾಂಚಿಎಸ್. ಆರ್.ರಂಜಿತ್, ರಾಜ್ಯ ಸಮಿತಿ ಸದಸ್ಯರಾದ ಎನ್. ರವಿಕುಮಾರ್, ವಿಶೇಷ ಆಹ್ವಾನಿತರಾದ ಜೆ. ಪದ್ಮನಾಭ್ ಮೊದಲಾದವರು ಉಪಸ್ಥಿತರಿದ್ದರು.

“ಮುಂದಿನ ದಿನಗಳಲ್ಲಿ ಪತ್ರಕರ್ತರಿಗಾಗಿತಾಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದ ಕ್ರೀಡಾಕೂಟ ಆಯೋಜನೆ, ಪತ್ರಿಕಾ ದಿನಾಚರಣೆ, ಸಾಧಕ ಪತ್ರಕರ್ತರಿಗೆ ಪ್ರಶಸ್ತಿಗಳ ವಿತರಣೆ, ಸಂದರ್ಭಾನುಸಾರವಾಗಿ ಪತ್ರಕರ್ತರ ಆರೋಗ್ಯ ತಪಾಸಣೆ, ವಿಶೇಷವಾಗಿ ಪತ್ರಕರ್ತರ ಸೌಹಾರ್ಧ ಸಹಕಾರಿ ಸ್ಥಾಪಿಸುವ ನಿಟ್ಟಿನಲ್ಲಿ ಚಿಂತನೆ ನಡೆದಿದೆ.”

“ರಾಜ್ಯ ಸಂಘದ ಆಶಯದಂತೆ ತಾಲೂಕು ಕೇಂದ್ರಗಳಲ್ಲಿ ಪತ್ರಿಕಾ ಭವನ ನಿರ್ಮಾಣಕ್ಕೆ ಜಿಲ್ಲಾ ಸಂಘವು ಪೂರ್ಣ ಸಹಕಾರ ನೀಡಲಿದೆ. ಮಹಾನಗರ ಪಾಲಿಕೆಯಲ್ಲಿ ಸ್ಥಾಪಿತವಾಗಿರುವ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಯ ಸದ್ಬಳಕೆ ದೃಷ್ಟಿಯಿಂದ ಸಮಿತಿ ರಚನೆ ಜೊತೆಗೆ ತಾಲೂಕು ಕೇಂದ್ರಗಳಲ್ಲಿ ಪುರಸಭೆ, ನಗರಸಭೆ, ಪಟ್ಟಣ ಪಂಚಾಯತ್‌ಗಳಲ್ಲಿ ಈ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಜೊತೆಗೆ ಸಂದರ್ಭಾನುಸಾರವಾಗಿ ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮಗಳು, ಪತ್ರಕರ್ತರ ಜ್ಞಾನದ ಉನ್ನತೀಕರಣಕ್ಕಾಗಿ ರಸಗ್ರಹಣ ಕಾರ್ಯಾಗಾರಗಳು, ವಿವಿಧ ಕ್ಷೇತ್ರಗಳ ಸಂಪನ್ಮೂಲ ಹಾಗೂ ಸಾಧಕರೊಂದಿಗೆ ಸಂವಾದ ಕಾರ್ಯಕ್ರಮಗಳನ್ನು ನಡೆಸಲು ಚಿಂತಿಸಲಾಗಿದೆ.”

ಜಾಹಿರಾತು

LEAVE A REPLY

Please enter your comment!
Please enter your name here